ಚಾಮರಾಜನಗರ: ಹನೂರು ಶೂಟೌಟ್ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಡಾ.ಎಂ.ಎ.ಸಲೀಂ ಸೂಚಿಸಿದ್ದಾರೆ.
ಕಾವೇರಿ ವನ್ಯಜೀವಿಧಾಮದ ಶಾಗ್ಯ ವಲಯದ ಕರಡಿಕಲ್ಲು ಗುಡ್ಡದಲ್ಲಿ ನಡೆದ ಶೂಟೌಟ್ ಪ್ರಕರಣವನ್ನು ಸಿಐಡಿಗೆ ವಹಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಜಿಲ್ಲೆಯ ರಾಮಾಪುರ, ಹನೂರು ಮತ್ತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಶೂಟೌಟ್ ಪ್ರಕರಣದಲ್ಲಿ ಕಳ್ಳಬೇಟೆ ಶಿಬಿರಗಳ ಧ್ವಂಸ, ಜೀಪ್ ಜಖಂ, ಕಾಡಿಗೆ ಬೆಂಕಿ ಪ್ರಕರಣಗಳನ್ನು ಹೆಚ್ಚಿನ ತನಿಖೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿಗೆ ವರ್ಗಾಯಿಸಲಾಗಿದೆ. ಪ್ರಕರಣಗಳ ಕಡತಗಳನ್ನು ಹೆಚ್ಚಿನ ತನಿಖೆಗಾಗಿ ಕೂಡಲೇ ಸಿಐಡಿಗೆ ವೈಯಕ್ತಿಕವಾಗಿ ಹಸ್ತಾಂತರಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಈ ಸಂಬಂಧದ ಸಂಪೂರ್ಣ ಕಡತಗಳನ್ನು ಸಿಐಡಿ ತನಿಖಾಧಿಕಾರಿಗೆ ವೈಯಕ್ತಿಕವಾಗಿ ಹಸ್ತಾಂತರಿಸುವಂತೆ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ಅವರಿಗೆ ಫ್ಯಾಕ್ಸ್ ಸಂದೇಶ ರವಾನೆಯಾಗಿದ್ದು, ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಮಹಾನಿರ್ದೇಶಕರು, ಮೇಲ್ಕಂಡ ಪ್ರಕರಣಗಳ ಮುಂದಿನ ತನಿಖೆಯನ್ನು ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಕರಣಗಳ ತನಿಖೆ ಪೂರ್ಣಗೊಂಡ ನಂತರ ವಿವರವಾದ ವರದಿಯನ್ನು ಈ ಕಚೇರಿಗೆ ಸಲ್ಲಿಸಬೇಕು ಎಂದು ಡಾ.ಎಂ.ಎ. ಸಲೀಂ ಸೂಚಿಸಿದ್ದಾರೆ.
ಹನೂರು ಶೂಟ್‌ಔಟ್ ಪ್ರಕರಣ : ಸಿಐಡಿ ತನಿಖೆಗೆ ವಹಿಸಿದ ಸರ್ಕಾರ