ದೆಹಲಿ ಪತ್ರಕರ್ತೆಯರಿಗೆ ಕಿರುಕುಳ : ಶಿವಮೊಗ್ಗ ಪತ್ರಕರ್ತರಿಂದ ಖಂಡನೆ

ಶಿವಮೊಗ್ಗ : ದೆಹಲಿಯಲ್ಲಿ ಪತ್ರಕರ್ತೆಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ, ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ದೆಹಲಿಯ ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯ ವರದಿಗೆ ತೆರಳಿದ್ದ ಮೂವರು ಪತ್ರಕರ್ತೆಯರ ಮೇಲೆ ನಡೆದ ಹಲ್ಲೆಯ ಘಟನೆಗಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಬಲವಾಗಿ ಖಂಡಿಸಿದೆ.

ಈ ಸಂದರ್ಭದಲ್ಲಿ ಪತ್ರಕರ್ತೆಯರನ್ನು ಪೊಲೀಸ್ ಅಧಿಕಾರಿಯೊಬ್ಬರು ಅನುಚಿತವಾಗಿ ಎಳೆದಾಡಿ, ಲೈಂಗಿಕ ಕಿರುಕುಳ ನೀಡಿರುವುದು ಅಕ್ಷಮ್ಯ ಆ ಅಧಿಕಾರಿಯ ವಿರುದ್ಧ ದೂರು ದಾಖಲಿಸಲು ಹೋದ ಪತ್ರಕರ್ತೆಯರನ್ನು ಪೊಲೀಸರು ಗಂಟೆಗಟ್ಟಲೇ ಕಾಯಿಸಿ, ಎಫ್ ಐ ಆರ್ ದಾಖಲಿಸಲು ಹಿಂದೇಟು ಹಾಕಿ, ಆಕೆಯನ್ನೇ ವಶಕ್ಕೆ ಪಡೆದಿರುವುದು ಕಾನೂನುಬಾಹಿರ. ಕೂಡಲೇ ತಪ್ಪಿತಸ್ಥ ಆ ಅಧಿಕಾರಿಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಂಘ ಒತ್ತಾಯಿಸಿದೆ.

ಅಧಿಕೃತವಾದ ಗುರುತು ಪತ್ರಗಳನ್ನು ಹೊಂದಿದ್ದ ಸ್ವತಂತ್ರ ಮಾಧ್ಯಮಗಳು ಹಾಗೂ ಡಿಜಿಟಲ್ ಮಾಧ್ಯಮದ ಪತ್ರಕರ್ತರೊಂದಿಗೆ ಪೊಲೀಸರು ಹಿಂಸಾತ್ಮಕವಾಗಿ ವರ್ತಿಸಿದ್ದಾರೆ. ಅಲ್ಲದೇ ಪ್ರತಿಭಟನಾಕಾರರ ಜೊತೆ ಕೆಲ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ದೆಹಲಿ ಪೊಲೀಸರ ವರ್ತನೆ ಪ್ರಜಾಪ್ರಭುತ್ವಕ್ಕೆ ಮಾರಕ. ನೀಟ್ ಪರೀಕ್ಷೆ ವಿವಾದಕ್ಕೆ ಸಂಬಂಧಿಸಿ ಕಳೆದ ತಿಂಗಳು ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ವರದಿಗಾಗಿ ತೆರಳಿದ್ದ ಪತ್ರಕರ್ತೆಯರ ಮೇಲೂ ಪೊಲೀಸರು ಇದೇ ರೀತಿಯ ಹಲ್ಲೆ ನಡೆಸಿದ್ದರು.

ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದರಿಂದ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ಪತ್ರಿಕಾ ರಂಗದ ಮೇಲೆ ನಿರಂತರ ವಾಗಿ ನಡೆಯುತ್ತಿರುವ ಈ ರೀತಿಯ ಹಲ್ಲೆಗಳಿಗೆ ಕಡಿವಾಣ ಹಾಕಬೇಕಿದೆ. ಮತ್ತು ತಪ್ಪೆಸಗಿದ ಪೋಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘ ಆಗ್ರಹಿಸಿದೆ. .

ಮನವಿ ಸಲ್ಲಿಸಲು ಪತ್ರಕರ್ತರಾದ ವೈದ್ಯನಾಥ್ ಹೆಚ್ ಯು,  ಕೆ. ವಿ. ಶಿವಕುಮಾರ್,  ಎನ್. ರವಿಕುಮಾರ್,  ಆರ್.ಎಸ್. ಹಾಲಸ್ವಾಮಿ ತೆರಳಿದ್ದರು. 

More articles

Latest article

Most read