ಅತ್ತೆ ಮಗನ ಕಾಟಕ್ಕೆ ಬೇಸತ್ತು ಮೊದಲ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ:

ಬೆಂಗಳೂರು: ಅತ್ತೆಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಬಾಗಲಕುಂಟೆಯ ಶೆಟ್ಟಿಹಳ್ಳಿಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಳೆ. ಈ ಸಂಬಂಧ ಬಾಗಲಕುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರುಕುಳ ನೀಡಿದ ಆರೋಪದಡಿಯಲ್ಲಿ ಈಕೆಯ ಅತ್ತೆ ಮಗ ಸ್ವಾಗತ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಸ್ವಾಗತ್‌ ಹಾಗೂ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಹಲವು ವರ್ಷಗಳಿಂದ ಅನೋನ್ಯವಾಗಿದ್ದರು. ಆದರೆ ಇತ್ತೀಚೆಗೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಪದೇ ಪದೇ ಜಗಳವಾಡುತ್ತಿದ್ದರು. ಮೇಲಾಗಿ ಅತ್ತೆಯ ಮಗ ಹೊಡೆದು ಬಡಿಯುತ್ತಿದ್ದ ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿ ತಾಯಿ ಕೆಲಸದಿಂದ ಹಿಂತಿರುಗಿ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆಗೆ ಶರಾಣಾಗಿರುವುದು ಬೆಳಕಿಗೆ ಬಂದಿದೆ.

More articles

Latest article

Most read