ಕನ್ನಡದಲ್ಲಿ ಮಾತಾಡಿದ್ದಕ್ಕೆ ಹರ್ಷಿಕಾ ಪೂಣಚ್ಚ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ನಡೆಯಿತಾ?

Most read

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಫ್ರೇಜರ್ ಟೌ ನ ಕರಾಮಾ ಎಂಬ ರೆಸ್ಟೋರೆಂಟ್ ಗೆ ಊಟಕ್ಕೆ ಹೋಗಿದ್ದಾಗ ಕ್ಷುಲ್ಲಕ ಕಾರಣಕ್ಕೆ ಜಗಳಗಳು ನಡೆದಿದ್ದು, ತಮ್ಮ ಹಾಗು ತಮ್ಮ ಪತಿಯ ಮೇಲೆ ಹಲ್ಲೆಯ ಯತ್ನ, ದರೋಡೆ ಯತ್ನ ನಡೆಯಿತು ಎಂದು ಆರೋಪಿಸಿದ್ದಾರೆ. ಈ ಸಂಬಂಧ ಅವರು ತಮ್ಮ ಇನ್ಸ್ಟಾಗ್ರಾಂ ಅಕೌಂಟಿನಲ್ಲಿ ಸುದೀರ್ಘವಾಗಿ ವಿವರಿಸಿಕೊಂಡಿದ್ದಾರೆ.

ಊಟ ಮುಗಿಸಿ ಹೊರಡುವಾಗ ಪಾರ್ಕಿಂಗ್ ಜಾಗದಲ್ಲಿ ವಾಹನವನ್ನು ತೆಗೆಯುವಾಗ ಈ ಗಲಾಟೆ ನಡದಿದೆ. ಆಶ್ಚರ್ಯವೆಂದರೆ ಘಟನೆ ನಡೆದ ನಂತರ ಯಾವುದೇ ಪೊಲೀಸ್ ದೂರು ದಾಖಲಿಸದ ಹರ್ಷಿಕಾ ಈಗ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಾಕಿದ್ದೇಕೆ ಎಂಬ ಪ್ರಶ್ನೆ ಉದ್ಭವಿಸಿದೆ. ಹರ್ಷಿಕಾ ಅವರು ತಮ್ಮ ಪೋಸ್ಟ್ ನಲ್ಲಿ ಒಂದೆರಡು ದಿನಗಳ ಹಿಂದೆ ನಡೆದ ಘಟನೆ ಎಂದು ಬರೆದಿದ್ದು, ಯಾವ ದಿನಾಂಕದಂದು ಈ ಗಲಾಟೆ ನಡೆದಿದೆ ಎಂದು ಸ್ಪಷ್ಟವಾಗಿ ಬರೆದಿಲ್ಲ.

ಹರ್ಷಿಕಾ ಪೂಣಚ್ಚ ಹಂಚಿಕೊಂಡ ವಿಡಿಯೋದಲ್ಲಿ, ಸ್ಥಳೀಯರು ಹರ್ಷಿಕಾ ಮತ್ತು ಅವರ ಪತಿಯನ್ನು ಸಮಾಧಾನ ಮಾಡಿ ಕಳಿಸುವ ದೃಶ್ಯಗಳಿವೆ. ಸ್ಥಳೀಯ ಜನರು ಯಾರೋ ಊಟಕ್ಕೆ ಬಂದವರು ನಿಮ್ಮ ಜೊತೆ ಜಗಳ ಮಾಡಿದ್ದಾರೆ. ಅವರ ಪರವಾಗಿ ನಾವೇ ಕ್ಷಮೆ ಕೇಳ್ತೀವಿ. ರೋಡ್ ಬ್ಲಾಕ್ ಆಗುತ್ತಿದೆ, ಇಲ್ಲಿಂದ ಹೊರಡಿ ಎಂದು ಹೇಳುವ ಮಾತುಗಳು ವಿಡಿಯೋದಲ್ಲಿ ಕೇಳಿಬರುತ್ತದೆ.

ಫ್ರೇಜರ್ ಟೌನ್ ಹೋಟೆಲ್ ಗೆ ಪತಿ ಭುವನ್ ಅವರೊಂದಿಗೆ ತೆರಳಿದ್ದಾಗ ಆದ ಘಟನೆಗಳನ್ನು ಹರ್ಷಿಕಾ ವಿವರಿಸಿದ್ದು ಅದರ ಪೂರ್ಣ ಪಾಠ ಹೀಗಿದೆ. ಬಹುಶಃ ಹರ್ಷಿಕಾ ಅವರು ಇಂಗ್ಲಿಷ್ ನಲ್ಲಿ ಬರೆದು ಕನ್ನಡದಲ್ಲಿ ಅದನ್ನು ಟ್ರಾನ್ಸ್ ಲೇಟ್ ಮಾಡಿರುವುದರಿಂದ ಕೆಲವು ವಾಕ್ಯಗಳು ಅಸ್ಪಷ್ಟ ಮತ್ತು ಅಸಹಜವಾಗಿವೆ. ನಮ್ಮ ಓದುಗರ ಮಾಹಿತಿಗಾಗಿ ಅವರ ಇಡೀ ಹೇಳಿಕೆಯನ್ನು ಯಥಾವತ್ತಾಗಿ ಇಲ್ಲಿ ನೀಡುತ್ತಿದ್ದೇವೆ.

ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ ????

ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ. ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ. ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯವಾಗಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ.

ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು , ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು. ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿದರು ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದು ಅದರಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು.

ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು. ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು. ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರೀಯಿಸಲಿಲ್ಲ. ಅಲ್ಲದೆ ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. “ಯೇ ಲೋಕಲ್ ಕನ್ನಡ್ ವಾಲಾ ಹೇ” (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ…

https://www.instagram.com/p/C57a1ObPcFJ/?utm_source=ig_embed&ig_rid=6c2dfcdd-4bbf-4daf-8162-087b5eee8665

More articles

Latest article