ಹಾಸನ ಕೇಸ್ ಪ್ರಪಂಚದ ಅತಿ ದೊಡ್ಡ ಲೈಂಗಿಕ ಹಗರಣ: ಸಚಿವ ಕೃಷ್ಣಬೈರೇಗೌಡ

Most read

ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಮಾನ, ಮನೆ, ಮಾಂಗಲ್ಯ ದೋಚಿದ್ದು ಅಪರಾಧ ಅಲ್ಲ, ಇದರ ವಿರುದ್ದ ಮಾತನಾಡಿದ್ದು ಅಪರಾಧವಾಗಿದೆ. ಮೂಲ ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಸಂತ್ರಸ್ಥರ ಮಾನ ಹರಣವಾಗಿದೆ ಜೊತೆಗೆ ನ್ಯಾಯ ಹರಣ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಹಿಳೆಯರ ಮಾನದ ಬಗ್ಗೆ ಮಾತನಾಡಬೇಕಾಗಿತ್ತು, ಆದರೆ ಬೇರೆಯದೆ ವಿಚಾರ ಚರ್ಚೆ ಆಗುತ್ತಿದೆ. ಪ್ರಕೃಣದ ಆರೋಪಿಯ ಬಳಿ ಕೆಲಸ ಮಾಡುತ್ತಿದ್ದವನು ಬಿಜೆಪಿ ನಾಯಕನಿಗೆ ಕೊಟ್ಟರು, ಆತನಿಗೆ ಸಾಕ್ಷಿ ಕೊಟ್ಟು ಒಂದು ವರ್ಷದ ಮೇಲಾಗಿದೆ. ಇದನ್ನು ತೆಗೆದುಕೊಂಡವನು ವಕೀಲ ನ್ಯಾಯದ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವವನು ಏಕೆ ಇದನ್ನು ಮೊದಲೇ ಪೊಲೀಸರ ಗಮನಕ್ಕೆ ತರಲಿಲ್ಲ. ಆತ ಕೊಟ್ಟಿದಿದ್ದರೇ ಬೀದಿಯಲ್ಲಿ ಯಾರ ಮಾನವೂ ಹರಾಜಾಗುತ್ತಿರಲಿಲ್ಲ. ಪೊಲೀಸರ ಮೇಲೆ ನಂಬಿಕೆ ಇಲ್ಲದಿದ್ದರೆ ಮುಖ್ಯನ್ಯಾಯಮೂರ್ತಿಗಳಿಗೆ ನೀಡಬಹುದಿತ್ತು. ಅಪರಾಧವನ್ನು ಮುಚ್ಚಿಟ್ಟಿರುವುದು ಕೂಡ ಅಷ್ಟೇ ಅಪರಾಧ ಎಂದಿದ್ದಾರೆ.

ಇಂತಹ ಬ್ಲಾಕ್ ಮೇಲ್ ಮಾಡುವ ವ್ಯಕ್ತಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ಚರ್ಚೆಮಾಡಿದವರು ಹಾಸನಾಂಭ ದೇವಸ್ಥಾನಕ್ಕೆ ಬಂದು ದೇವರ ಮೇಲೆ ಕೈಯಿಟ್ಟು ಚರ್ಚೆ ಮಾಡಲಿ. ಟಿಕೆಟ್ ತಪ್ಪಿಸಲು ಇದನ್ನು ಬಳಸಿಕೊಂಡರು. ನೂರಾರು ಮಹಿಳೆಯರ ಮಾನ ಹರಣ ಆಗಿರುವುದೇ ಇವರಿಂದ ಎಂದು ಆರೋಪಿಸಿದ್ದಾರೆ.

ಬಿಜೆಪಿಯವರು ಇವರ ಬಳಿ ಇರುವ ಅಷ್ಟು ಮತಗಳನ್ನು ಹಾಕಿಸಿಕೊಂಡು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಶಿ, ಮೋದಿ ಅವರ ಹೇಳಿಕೆಗಳು ಇದೇ ರೀತಿ ಇವೆ. ಜೆಡಿಎಸ್ ವಿರುದ್ದ ಮಾತನಾಡಲು ಆಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ಮಾತನಾಡುತ್ತಿದ್ದಾರೆ.

ಲೈಂಗಿಕ ದೌರ್ಜನ್ಯ ನಡೆಸು ಎಂದು ಕಾಂಗ್ರೆಸ್ ಹೇಳಿತ್ತೇ?. ಅರವತ್ತು ವರ್ಷದ ಮಹಿಳೆಯನ್ನು ಅಪಹರಣ ಮಾಡಲು ಕಾಂಗ್ರೆಸ್ ಹೇಳಿತ್ತೇ? ಅಪಹರಣ ಮಾಡಿದ್ದೂ ಸುಳ್ಳು ಎಂದು ಹೇಳುತ್ತಾರೆ ಇವರು.

ಇವರುಗಳು ಏನೂ ಮಾಡಿದರೂ ನಡೆಯುತ್ತದೆ. ಕಾನೂನಿಗಿಂತ, ಸಂವಿಧಾನಕ್ಕಿಂತ ಮೇಲೆ ಎಂದುಕೊಂಡಿದ್ದಾರೆ. ಅವರ ಕುಟುಂಬದಲ್ಲಿಒಬ್ಬರಾದರೂ ಈ ಘಟನೆಯನ್ನು ಖಂಡಿಸಿಲ್ಲ. ಎಲ್ಲೂ ಇರುವ ಅವನನ್ನು ಕರೆಸಿ ಕಸ್ಟಡಿಗೆ ಒಳಗಾಗು ಎಂದು ಹೇಳಬಹುದಿತ್ತಲ್ಲವೇ?

ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರ ಮಾತುಗಳು

ದೇವರಾಜೇಗೌಡ ಅವರು ಕಳೆದ ಒಂದು ವರ್ಷದಿಂದ ಅನೇಕ ಹೇಳಿಕೆಗಳನ್ನು ಗಮನಿಸುತ್ತಾ ಹೋಗಬೇಕು. ಈತ ಎಸ್ ಐಟಿ ತನಿಖೆ ಪ್ರಾರಂಭ ಆದ ಕಾರಣಕ್ಕೆ ಹಾಗೂ ಇದರಿಂದ ಆತನಿಗೆ ತೊಂದರೆ ಎಂದು ಗೊತ್ತಾಗಿ ವಿರುದ್ದವಾಗಿ ಹೇಳಿಕೆ ನೀಡುತ್ತಿದ್ದಾರೆ. ಎಸ್ ಐಟಿ ಸತ್ಯವನ್ನು ಹೊರಗೆ ತರುತ್ತದೆ. ಅಲ್ಲದೇ ಸಿಬಿಐ ಗೆ ಈ ಪ್ರಕರಣ ಹೋದರೆ ಕೋಲ್ಡ್ ಸ್ಟೋರೇಜ್ಗೆ ಸೇರುತ್ತದೆ ಎಂದು ಹೀಗೆ ಮಾಡಲಾಗುತ್ತಿದೆ. ಇಂತಹ ಹೀನ ಕೆಲಸ ನಮ್ಮ ಜಾತಿಯವರಿಂದ ಆಗಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್, ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ರಾಜೀವ್ ಗೌಡ, ಶಾಸಕರಾದ ರಮೇಶ್ ಬಾಬು ಬಂಡ್ಢಿಸಿದ್ದೇಗೌಡ, ಗಣಿಗ ರವಿಕುಮಾರ್, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕೆಪಿಸಿಸಿ ವಕ್ತಾರರೆ ಶ್ರೀಮತಿ ತೇಜಶ್ವಿನಿ ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್ ಭಾಗವಹಿಸಿದ್ದರು.

More articles

Latest article