Thursday, May 23, 2024

ಹಾಸನ | ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ

Most read

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಕಾಫಿ ತೋಟಕ್ಕೆ ಕೆಲಸಕ್ಕೆ ಹೋದವರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಕಲ್ಕುಂದ ಗ್ರಾಮದಲ್ಲಿ ನಡೆದಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಫಿ ಬೀಜದ ಚೀಲಗಳನ್ನು ತರಲು ಕಾಫಿ ತೋಟಕ್ಕೆ ಹೋಗುತ್ತಿದ್ದ ರಮೇಶ್, ಶಾಶ್ವತ್ ಎಂಬುವವರ ಮೇಲೆ ದಿಢೀರ್  ಕಾಡಾನೆ ದಾಳಿ ಮಾಡಿದೆ. ಕಾಡಾನೆ ತುಳಿತದಿಂದ ರಮೇಶ್ ಎಂಬುವವರಿಗೆ ಕಾಲು ಮುರಿದಿದೆ. ಕಾಡಾನೆ ದಾಳಿ ಮಾಡುತ್ತಿದ್ದಂತೆ ಶಾಶ್ವತ್ ತಪ್ಪಿಸಿಕೊಳ್ಳಲು ಓಡಿ ಹೋಗುವ ಬರದಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅ​ಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

More articles

Latest article