ಬೆಂಗಳೂರು: ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷ ಹಾಸನದಲ್ಲಿ ಹಮ್ಮಿಕೊಂಡಿರುವ ಜನಕಲ್ಯಾಣ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಂಆರ್ ಸೇರಿದಂತೆ ಅನೇಕ ಸಚಿವರು ಮತ್ತು ಶಾಸಕರು ಬೆಂಗಳೂರಿನಿಂದ ಹೊರಟಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೆಔೇಗೌಡ ಅವರ ತವರೂರು ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಜೆಡಿಎಸ್-ಬಿಜೆಪಿ ಜೋಡಿಗೆ ಟಕ್ಕರ್ ಕೊಡಲು ಕೈ ಪಡೆ ಮುಂದಾಗಿದೆ.
ಅರಸೀಕೆರೆ ರಸ್ತೆಯ ಎಸ್ಎಂ ಕೃಷ್ಣ ನಗರದಲ್ಲಿರುವ ಕೆಎಸ್ ಸಿಎ ಕ್ರಿಕೆಟ್ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜಾಗಿದೆ. 2ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಕೆಲವೇ ಹೊತ್ತಿನಲ್ಲಿ ಸಮಾವೇಶಕ್ಕೆ ಚಾಲನೆ ಸಿಗಲಿದೆ. ಈಗಾಗಲೇ ಸಾರ್ವಜನಿಕರು ಸಮಾಔೇಶದ ಸ್ಥಳದಲ್ಲಿ ಆಸೀನರಾಗುತ್ತಿದ್ದಾರೆ. 480 ಅಡಿ ಅಗಲ ಮತ್ತು 600 ಅಡಿ ಉದ್ದದ ಬೃಹತ್ ಟೆಂಟ್ ಹಾಕಲಾಗಿದ್ದು, 70 ಸಾವಿರ ಜನರು ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಸೋಮವಾರ ಸಮಾವೇಶದ ಸ್ಥಳದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಸಿದ್ದತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಡಿಯಲ್ಲಿ ಸಮಾವೇಶ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಾಡಿರುವ ಆರೋಪಗಳಿಗೆ ಉತ್ತರ ನೀಡುವುದಾಗಿ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಕರ್ನಾಟಕ ವ್ಯವಹಾರಗಳ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೂ ಭಾಗವಹಿಸಲಿದ್ದಾರೆ.
ಸಮಾವೇಶದ ಭದ್ರತೆಗಾಗಿ ಐವರು ಎಸ್ ಪಿ, 6 ಹೆಚ್ಚುವರಿ ಎಸ್ ಪಿ, 12 ಡಿವೈಎಸ್ ಪಿ, 40 ಇನ್ಸ್ಪೆಕ್ಟರ್ ಮತ್ತು 80 ಪಿ.ಎ.ಸ್.ಐ ಹಾಗೂ 2,000 ಪೊಲೀಸರನ್ನು ನಿಯೋಜಿಸಲಾಗಿದೆ. ಜನರನ್ನು ಕರೆ ತರಲು ಹಾಸನ ವಿಭಾಗ ಒಂದರಿಂದಲೇ 500ಕ್ಕೂ ಹೆಚ್ಚು ಬಸ್ ಬಾಡಿಗೆಗೆ ಪಡೆಯಲಾಗಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಬೆಂಗಳೂರಿನಿಂದ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ., ಮಂಗಳೂರು, ಚಿಕ್ಕಮಗಳೂರು, ಮಡಿಕೇರಿಯಿಂದಲೂ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.