ಹಾಸನ ಲೈಂಗಿಕ ಹಗರಣ: ಹೈಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕರಾಗಿ ರವಿವರ್ಮ ಕುಮಾರ್‌ ನೇಮಕ

ಬೆಂಗಳೂರು: ಹಾಲಿ ಸಂಸದ, NDA ಅಭ್ಯರ್ಥಿ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆ ಚುರುಕುಗೊಂಡಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ( Public Procecutor )ರಾಗಿ ನೇಮಕಗೊಂಡಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ದಾಖಲೆಯಾದ ಪ್ರಕರಣ, ಕೆ.ಆರ್.ನಗರದಲ್ಲಿ ದಾಖಲಾದ ಪ್ರಕರಣ ಮತ್ತು ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು SIT ತನಿಖೆ ಸಂದರ್ಭದಲ್ಲಿ ದಾಖಲಾಗಬಹುದಾದ ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪ್ರೊ.ರವಿವರ್ಮ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯದ ಹಿರಿಯ ನ್ಯಾಯವಾದಿಗಳಲ್ಲಿ ಪ್ರಮುಖರಾಗಿರುವ ಪ್ರೊ.ರವಿವರ್ಮ ಕುಮಾರ್‌ ಹಿಂದೆ ಅಡ್ವೊಕೇಟ್‌ ಜನರಲ್‌ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

More articles

Latest article

Most read