ಶಿಥಿಲಗೊಂಡಿರುವ ಕಟ್ಟಡಗಳು, ಉದುರುತ್ತಿರುವ ಚಾವಣಿಯ ಸಿಮೆಂಟ್, ಸಿಬ್ಬಂದಿ ಕೊರತೆ, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಇಲ್ಲ. ಮತ್ತೆ ಕೆಲವು ಕಡೆ ಹಾಸ್ಟೆಲ್ ಇದ್ದರೂ ಸಮರ್ಪಕ ನಿರ್ವಹಣೆಯ ಕೊರತೆ ಬಗ್ಗೆ ಇಂದು ಹಾಸನ SFI ಸದಸ್ಯರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದೂದ್ ಪೀರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮನವಿ ನಂತರ ಪತ್ರಿಕಾ ಹೇಳಿಕೆ ನೀಡಿರುವ SFI, ಹಾದನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಮಾಜಕಲ್ಯಾಣ ಇಲಾಖೆ ಮೇಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಕೂಪವಾಗಿದೆ, ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ ಮತ್ತು ಕೊಠಡಿಗಳು ಸೇರಿದಂತೆ ಯಾವು ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಶೈಕ್ಷಣಿಕ ವಾತವರಣವಿಲ್ಲದೆ ಅತ್ಯಂತ ಸಮಸ್ಯೆಗಳನ್ನು ಪ್ರತಿ ನಿತ್ಯ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಮಸ್ಯೆಗಳ ಬಗ್ಗೆ ನಿಲಯಪಾಲಕರಾದ ಚಂದ್ರಿಕಾರವರಿಗೆ ಹಲವು ಬಾರಿ ಬಗೆಹರಿಸುವಂತೆ ಒತ್ತಾಯಿಸಿದರು ಯಾವುದೆ ಪ್ರಯೋಜವಾಗಿರುವುದಿಲ್ಲ, ಸಮಸ್ಯೆಗಳನ್ನು ಬಗೆಹರಿಸುವ ಬದಲು ಮಕ್ಕಳ ಮೇಲೆ ದಮಕಿ ಹಾಕಿ ಬೆದರಿಕೆ ದೌರ್ಜನ್ಯವೆಸಗುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಖಾಲಿ ಮಾಡಿಕೊಂಡು ಹೋಗಿ ಎಂದು ಬೆದರಿಕೆ ಹಾಕುತ್ತಲೆ ಇದ್ದಾರೆ ಎಂದು ದೂರಿದ್ದಾರೆ.
ತಾಲ್ಲೂಕು ಅಧಿಕಾರಿಗಳಿಗೆ ಬಗ್ಗೆ ಮನವಿ ಮಾಡಿದರು ಯಾವುದೆ ಪ್ರಯೋಜವಾಗಿರುವುದಿಲ್ಲ. ಚಂದ್ರಿಕಾರವರಿಗೆ ರಾಜಕೀಯ ಪ್ರಭಾವಿಗಳ ಸಂಪರ್ಕ ಇರುವುದರಿಂದ ಅವರನ್ನು ಏನು ಮಾಡಲು ಸಾದ್ಯವಾಗಿರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹಾಸ್ಟೆಲ್ ನಲ್ಲಿ ತೀರ ಕಳೆಪೆ ಗುಣಮಟ್ಟದ ಆಹಾರವನ್ನು ತಾರಿಸುವುದು ಮತ್ತು ಸ್ವಚ್ಚತೆ ಇಲ್ಲದಿರುವುದರಿಂದ ಈಗಾಗಲೆ ನಾನಾ ರೋಗಗಳು ಹರಡಿ ವಿದ್ಯಾರ್ಥಿನಿಯರು ಆಸ್ಪತ್ರೆ ಸೇರಿರುತ್ತಾರ ಎಂದಿದ್ದಾರೆ.
ಸಾಮಾಜಿಕವಾಗಿ ಶೋಷಣೆಗೆ ಒಳಗಾದ ಸಮುದಾಯದಿಂದ ದಲಿತ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್ ಇದಾಗಿದ್ದು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಾತಾವರಣ ನಿರ್ಮಿಸಲು ಬೇಕಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕೂಡಲೆ ಕಲ್ಪಿಸಬೇಕೆಂದು ಉತ್ತಮ ಗುಣಮಟ್ಟದ ಆಹಾರ ನೀಡಬೇಕು ಮತ್ತು ಬೇರೆಯ ನಿಲಯಪಾಲಕರನ್ನು ನೀಯೋಜಿಸಬೇಕು ಇಲ್ಲವಾದಲ್ಲಿ ಎಸ್ ಎಫ್ ಐ SFI ಸಂಘಟನೆ ಹೋರಾಟ ಮುಂದುವರೆಸುತ್ತೇವೆ ಎಂದು ಸಂಭಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿರುತ್ತದೆ ಎಂದು ಆಗ್ರಹಿಸಿದ್ದಾರೆ.