ಉತ್ತರ ಪ್ರದೇಶ ರಾಜ್ಯದ ಹತ್ರಾಸ್ ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತಕ್ಕೆ ಸುಮಾರು 27 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹತ್ರಾಸ್ ಸಿಕಂದರಾ ರಾವ್ ಪಟ್ಟಣದಲ್ಲಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡಿ ಮುಗಿದ ನಂತರ ಈ ಘಟನೆ ನಡೆದಿದೆ.
ಶಿವ ಆರಾಧನೆಗಾಗಿ ಹತ್ರಾಸ್ ನಲ್ಲಿ ಸತ್ಸಂಗ ಕಾರ್ಯಕ್ರಮ ಮಾಡಲಾಗಿತ್ತು. ಸಭೆಯ ಕೊನೆಯಲ್ಲಿ ನೂಕುನುಗ್ಗಲಾಗಿ ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಗಂಭೀರವಾಗಿ ಕಾಲ್ತುಳಿತಕ್ಕೆ ಒಳಗಾದವರನ್ನು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಕೊಂಡೊಯ್ಯಲಾಗಿದೆ. ಅದೇ ರೀತಿ ಹಲವಾರು ಮಂದಿ ಗಾಯಗೊಂಡಿದ್ದು ನಾನಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ 25 ಮಹಿಳೆಯರುಲ್ಲಿ ಇಬ್ಬರು ಮಕ್ಕಳು ಹಾಗೂ ಇಬ್ಬರು ಪುರುಷರು ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.