ಮಂಗಳೂರು: ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕೇಸ್ ದಾಖಲು ಮಾಡಲಾಗಿದೆ. ಪುತ್ತೂರಿನ ಖಾಸಗಿ ಕಾಲೇಜು ಕಾರ್ಯಕ್ರಮವೊಂದರಲ್ಲಿ ಕೋಮುದ್ವೇಷ ಹರಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಇವರ ವಿರುದ್ಧ ದೂರು ದಾಖಲಿಸಲಾಗಿತ್ತು. ಈ ದೂರಿನನ್ವಯ ಎಫ್ ಐಆರ್ ದಾಖಲಾಗಿದೆ
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಿಎನ್ ಎಸ್ (BNS) ಸೆಕ್ಷನ್ 196, 299, 302, 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಮಾನವ ಬಂಧಿತ್ವ ವೇದಿಕೆಯ ಪುತ್ತೂರು ತಾಲ್ಲೂಕು ಸಮಿತಿ ಪದಾಧಿಕಾರಿಗಳು ಹಿಂಸೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನಲ್ ವಿರುದ್ಧವೂ ದೂರು ದಾಖಲಾಗಿದೆ.
ಜ.12ರಂದು ಪುತ್ತೂರಿನ ವಿವೇಕಾನಂದ ಕಾಲೇಜು ಆವರಣದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದ ಸಭೆಯಲ್ಲಿ ಭಾಷಣ ಮಾಡಿದ್ದರು. ವಿಕಸನ ಟಿವಿ ಎಂಬ ಹೆಸರಿನ ಯೂಟ್ಯೂಬ್ ಚಾನಲ್ ಕಾರ್ಯಕ್ರಮದ ವಿಡಿಯೊ ಪ್ರಸಾರ ಮಾಡಿತ್ತು.
ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳನ್ನು ನಿಂದಿಸಿ ಮಾತನಾಡಿದ್ದಾರೆ. ದ್ವೇಷ ಭಾಷಣ ಮಾಡದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದರೂ ಅದನ್ನು ಉಲ್ಲಂಘಿಸಿ ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಹಿಂಸೆಯನ್ನು ಪ್ರೇರೇಪಿಸುತ್ತಿದ್ದಾರೆ. ಆದ್ದರಿಂದ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾನವ ಬಂಧುತ್ವ ವೇದಿಕೆಯ ಪುತ್ತೂರು ತಾಲ್ಲೂಕು ಸಮಿತಿಯ ಪ್ರಧಾನ ಸಂಚಾಲಕ ಅಮಲ ರಾಮಚಂದ್ರ ಕೆ ಆಗ್ರಹಪಡಿಸಿದ್ದರು.

