ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಯುವಜನರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು: ಬಿ.ಎಸ್. ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವಂತೆ ಹಾಗೂ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನತೆಗೆ ಕರೆ ನೀಡಿದರು.

ಅವರು ಇಂದು ಕರ್ನಾಟಕ ರಾಜ್ಯ ಸಹಕಾರ  ಮಹಾಮಂಡಳ ನಿ. ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ ಬಿ.ಎಸ್. ವಿಶ್ವನಾಥ್ ರವರ  ಪುತ್ತಳಿಯನ್ನು ಅನಾವರಣಗೊಳಿಸಿ ಮಾತನಾಡಿದರು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಿ.ಎಸ್.ವಿಶ್ವನಾಥ್ ಅವರು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಹಕಾರಿ ಮುಖಂಡರು. ವಿವಿಧ ಸಹಕಾರ ಸಂಘಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿರುವ ಬಿ.ಎಸ್.ವಿಶ್ವನಾಥ್ ಅವರ ಪ್ರತಿಮೆಯನ್ನು ಇಂದು ಅತ್ಯಂತ ಸಂತೋಷದಿಂದ ಅನಾವರಣಗೊಳಿಸಲಾಗಿದೆ ಎಂದರು.

ಇಂದಿನ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಸಹಕಾರಿ ಧುರೀಣರಾದ ಜಿ.ಟಿ.ದೇವೇಗೌಡರು, ಸೋಮಶೇಖರ್ , ಷಡಕ್ಷರಿ , ರೇವಣ್ಣನವರು ಸೇರಿದಂತೆ ಎಲ್ಲ ಸಹಕಾರಿಗಳನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಅವರ ಕುಟುಂಬ ವರ್ಗದವರಿಗೆ ಶುಭಕೋರಿದರು.

More articles

Latest article

Most read