ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್‌ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.
ಬಂಧಿತರು, ಸಾದಿಕ್ ಅಗಸಿಮನಿ(29), ಶೋಯೆಬ್ (19) ಆಗಿದ್ದು,ಈವರೆಗೆ ಒಟ್ಟು 7 ಮಂದಿ ಅರೆಸ್ಟ್ ಆಗಿದ್ದಾರೆ. ಇನ್ನೋರ್ವ ಆರೋಪಿ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಡಿಸ್ಚಾರ್ಜ್ ಆದ ಬಳಿಕ ಬಂಧಿಸುತ್ತೇವೆ. ಸದ್ಯ ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತೇವೆ ಎಂದು ಎಸ್‌ಪಿ ಅಂಶುಕುಮಾರ್ ಮಾಹಿತಿ ನೀಡಿದ್ದಾರೆ.
ಬಂಧಿತರಲ್ಲಿ ಸಾದಿಕ್ ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ, ಶೋಯೆಬ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.