ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು

Most read

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ಮಂಜೂರು ಮಾಡಿದೆ. 

ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಪುರಸ್ಕರಿಸಿದೆ.

ಆರೋಪಿಗಳಾದ ಹುಕ್ಕೇರಿಯ ಭರತ್​ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್ (48), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಲೇಕರ್ (43) ಜಾಮೀನು ಪಡೆದರು.

ಈ ಎಲ್ಲ ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್​, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು.

ಆರೋಪಿಗಳು ಪ್ರಸಿಕ್ಯೂಷನ್​ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂಥದ್ದೇ ಆರೋಪದಲ್ಲಿ ಭಾಗಿಯಾಗಬಾರದು ಎಂದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

More articles

Latest article