ಮುಖ್ಯಮಂತ್ರಿ ಬದಲಾವಣೆ ನನ್ನ ಕೈಯಲ್ಲೂ ಇಲ್ಲ, ಧರ್ಮಗುರುಗಳ ಕೈಯಲ್ಲೂ ಇಲ್ಲ. ಶಾಸಕರ ಬೆಂಬಲ ನಂತರವೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಸ್ಥಾನನ ಅವರಿಗೆ ಕೊಡಿ ಇವರಿಗೆ ಕೊಡಿ ಅನ್ನೊಕೆ ಅದೇನು ಕಡಲೆಪುರಿನಾ? ಎಂದು ಸಮಾಜ ಕಲ್ಯಾಣ ಸಚಿವ ಹೆಚ್ಸಿ ಮಹಾದೇವಪ್ಪ ಟೀಕಿಸಿದ್ದಾರೆ.
ಸಿಎಂ, ಡಿಸಿಎಂ, ಅಧ್ಯಕ್ಷ ಹುದ್ದೆಯ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು. ಈ ರೀತಿ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ ಮರು ದಿನವೇ, ಮಳವಳ್ಳಿ ಶಾಕರ ನರೇಂದ್ರಸ್ವಾಮಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದರು ಈ ಸಿಎಂ ಆಪ್ತ ಮಹಾದೇವಪ್ಪ ಈಗ ಬಹಿರಂಗವಾಗಿಯೇ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಮಳವಳ್ಳಿಯ ಶಾಸಕ ನರೇಂದ್ರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಶಾಸಕರು ಹೇಳಿದ್ದರು.