ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ: ಡಿ.ಕೆ.ಸುರೇಶ್

ಬೆಂಗಳೂರು: ಹಲವಾರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿ, ರೆಕಾರ್ಡ್ ಮಾಡಿಕೊಂಡಿದ್ದ ಹಾಸನ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾತ್ರವಿದೆ ಎಂದು ಸಂಸದ ಡಿ.ಕೆ.ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದ ಅವರು, ಪ್ರಕರಣದಲ್ಲಿ ಹಾಸನ ನಾಯಕರ ಕೈವಾಡ ಇದೆ. ಈ ಬಗ್ಗೆ ಕುಮಾರಸ್ವಾಮಿಗೆ ಮೊದಲೇ ಮಾಹಿತಿ ಇತ್ತು ಎಂದು ಬಾಂಬ್ ಸಿಡಿಸಿದ್ದಾರೆ.

ಪ್ರಕರಣದ ಹಿಂದೆ ಎಚ್ ಡಿಕೆ ಕೈವಾಡ ಇದೆ, ಆದರೆ ಅವರು ಡಿ.ಕೆ.ಶಿವಕುಮಾರ್ ಹೆಸರು ಎಳೆದು ತರುತ್ತಿದ್ದಾರೆ. ಅವರ ಹೆಸರು ಹೇಳದೇ ಇದ್ದಾರೆ. ಕುಮಾರಸ್ವಾಮಿಯವರಿಗೆ ಊಟ ಸೇರಲ್ಲ ಎಂದು ಅವರು ಲೇವಡಿ ಮಾಡಿದ್ದಾರೆ.

ನಮ್ಮ ಹತ್ತಿರ ಪೆನ್ ಡ್ರೈವ್ ಇದ್ದಿದ್ರೆ…. ಚುನಾವಣೆಗೂ ಮುನ್ನ ವಿಡಿಯೋ ರಿಲೀಸ್ ಮಾಡ್ತಿದ್ವಿ. ವಿಡಿಯೋ‌ ರಿಲೀಸ್ ಮಾಡಿರುವ ಕುಮಾರಸ್ವಾಮಿ ವ್ಯವಸ್ಥಿತವಾಗಿ ನುಣುಚಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು.

More articles

Latest article

Most read