ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಮೈಸೂರಿನ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಸಂಬಂಧ ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದರು. ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಕೆಲ ಗಂಟೆಗಳ ಹಿಂದೆಯಷ್ಟೇ ರೇವಣ್ಣನ ಆಪ್ತನ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ರಕ್ಷಣೆ ಮಾಡಲಾಗಿದೆ. ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ವಿಚಾರಣೆಗೆ ಮತ್ತಷ್ಟು ಬಲಬಂದಿದೆ.