ಬೆಂಗಳೂರು: ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದಡಿಯಲ್ಲಿ ಜೆಡಿಎಸ್ ಮುಖಂಡ, ಶಾಸಕ ಎಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ನಿಗದಿಪಡಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕ್ರಿಯೆಗೆ ನೀಡಲಾಗಿದ್ದ ತಡೆ ಆದೇಶವನ್ನು ಹೈಕೋರ್ಟ್ ಫೆಬ್ರುವರಿ 7ರವರೆಗೆ ವಿಸ್ತರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ವಿಚಾರಣೆ ನಡೆಸಿತು. ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಈ ಆದೇಶ ಹೊರಡಿಸಿದ್ದಾರೆ. ಅಲ್ಲಿಯವರೆಗೆ ರೇವಣ್ಣ ಅವರಿಗೆ
ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.