Thursday, December 12, 2024

ಎಡಿಜಿಪಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್​

Most read

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್​ ಠಾಣೆಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ.

ಪ್ರಕರಣ ರದ್ದು ಕೋರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಪೊಲೀಸರನ್ನು ಕಳಿಸಿ ಬಂಧಿಸಲು ಯತ್ನಿಸುತ್ತಿದ್ದಾರೆ. 10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಯತ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದರು.

ಈ ವಾದ ಆಲಿಸಿದ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದ. ಅಲ್ಲದೇ ಎಫ್ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ನಿರ್ಬಂಧಿಸಿದೆ.

More articles

Latest article