ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆ ಇಂದು ಶುಕ್ರವಾರ ಸಂಜೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆಗೆ ಹಾಜರಾದ್ದು, ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಯನ್ನೆ ಕುಮಾರಸ್ವಾಮಿ ಎದುರಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು. ದೆಹಲಿಯಿಂದ ಬಂದ ಅವರು ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ.
ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸತತ 3 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.