Saturday, December 7, 2024

ಎಫ್ ಐಆರ್ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋದ ಸಚಿವ ಎಚ್ ಡಿಕೆ, ನಿಖಿಲ್

Most read

ಬೆಂಗಳೂರು: ಲೋಕಾಯಕ್ತ ಎಸ್ಐಟಿ ವಿಭಾಗದ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಒಡ್ಡಿದ ಆರೋಪ ಕುರಿತು ತಮ್ಮ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬುಧವಾರ ಇಬ್ಬರೂ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ತಮ್ಮನ್ನು ಬೆದರಿಸಿ ಸುಳ್ಳು ಆರೋಪಗಳನ್ನು ಹೊರಿಸಿದ್ದಾರೆ ಎಂದು ಚಂದ್ರೇಖರ್ ಅವರು ಅಕ್ಟೋಬರ್ ನಲ್ಲಿ ನೀಡಿದ್ದ ದೂರು ಆಧರಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಸಂಜಯನಗರ ಠಾಣೆಯಲ್ಲಿ ನಿನ್ನೆ ಮಂಗಳವಾರ ಎಫ್ಐಆರ್ ದಾಖಲಾಗಿದೆ.


ಕುಮಾರಸ್ವಾಮಿ ಆರೋಪಿಯಾಗಿರುವ ಪ್ರಕರಣವೊಂದರ ವಿಚಾರಣೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಮುಖ್ಯಸ್ಥರೂ ಆಗಿದ್ದಾರೆ. ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗೆ ಗಣಿಗಾರಿಕೆಗೆ ಅಕ್ರಮವಾಗಿ ಅನುಮತಿ ನೀಡಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಸಲು ಎಡಿಜಿಪಿ ಅವರು ರಾಜ್ಯಪಾಲರಿಂದ ಅನುಮತಿ ಪಡೆದುಕೊಂಡಿದ್ದರು.


ಸೆ.28 ಮತ್ತು 29 ರಂದು ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಕರ್ನಾಟಕ ರಾಜ್ಯ ಕೇಡರ್ನಿಂದ ಬೇರೆ ರಾಜ್ಯಕ್ಕೆ ವರ್ಗಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ನನ್ನ ವಿರುದ್ದ ಸುಳ್ಳು ಲಂಚದ ಆರೋಪ ಹೊರಿಸಿದ್ದಾರೆ. ನನ್ನ ಕುಟುಂಬದ ವಿರುದ್ಧವೂ ಆಪಾದನೆ ಮಾಡಿದ್ದಾರೆ. ಕರ್ನಾಟಕದಲ್ಲಿ ಮುಂದುವರೆಯಲು ನಕಲಿ ವೈದ್ಯಕೀಯ ಪ್ರಮಾಣ ಪತ್ರ ತೆಗೆದುಕೊಂಡಿದ್ದೇನೆ ಎಂದು ಆರೋಪಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.


ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಸೆ.29 ರಂದು ಇಂತಹುದೇ ಆಪಾದನೆಗಳನ್ನು ನನ್ನ ಮೇಲೆ ಹೊರಿಸಿದ್ದಾರೆ. ಅವರ ಆಪ್ತ ಸುರೇಶ್ ಬಾಬು ನನ್ನ ವಿರುದ್ದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ. ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಆರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿಬೆದರಿಕೆ ಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದರು.
ಅಕ್ಟೋಬರ್ ತಿಂಗಳಲ್ಲಿ ದೂರು ನೀಡಲಾಗಿದ್ದು, ನವಂಬರ್ 4ರಂದು ಭಾರತೀಯ ನ್ಯಾಯ ಸಂಹಿತೆ 224ರ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.

More articles

Latest article