ನೂರು ಜನ ಸಿದ್ದರಾಮಯ್ಯ ಬಂದ್ರೂ ನನ್ನನ್ನ ಬಂಧಿಸಲು ಸಾಧ್ಯವಿಲ್ಲ: ಕುಮಾರಸ್ವಾಮಿ

ಸಿದ್ದರಾಮಯ್ಯ ಅವರ ಮುಡಾ ಬದಲಿ ನಿವೇಶನ ಕೇಸ್ ಹಾಗೂ ಕುಮಾರಸ್ವಾಮಿ ಅವರ ಗಣಿ ಗುತ್ತಿಗೆ‌ ಹಗರಣ ವಿಷಯವಾಗಿ ಇಬ್ಬರ ನಡುವೆ ವಾಕ್ಸಮರ ನಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.

ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನ ಬಂಧನ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನನ್ನ ಬಂಧನ ಮಾಡೋಕೆ ನೂರು ಜನ ಸಿದ್ದರಾಮಯ್ಯ ಬಂದರೂ ಆಗೊಲ್ಲ. ನನಗೆ ಭಯ ಶುರುವಾಗಿದೆ ಅಂತ ಸಿಎಂ ಹೇಳ್ತಾರೆ. ನನಗೆ ಭಯ ಶುರುವಾಗಿದೆಯಾ? ನನ್ನನ್ನ ನೋಡಿದ್ರೆ ಹಾಗೆ ಅನ್ನಿಸುತ್ತಾ ಎಂದು ಮಾಧ್ಯಮಗಳಿಗೆ ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಒಂದು ವಾರದಿಂದ ಹೇಗೆ ನಡೆದುಕೊಂಡಿದ್ದಾರೆ ಅಂತ ಜನ ನೋಡಿದ್ದಾರೆ. ಮೈಸೂರಿನ ದಾಖಲೆಗಳೇ ಇವೆಯಲ್ಲ. ಮುಡಾ ಆಸ್ತಿ ನನ್ನ ಆಸ್ತಿ ಅಂತ ಹೇಳ್ತಿದ್ದಾರೆ. ಇಂತಹ ಭಂಡತನ ಮುಖ್ಯಮಂತ್ರಿ ನಾನು ನೋಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

More articles

Latest article

Most read