ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಮಣಿಸಲು ಈ ಬಾರಿ ಬಿಜೆಪಿ-ಜೆಡಿಎಸ್ ಒಂದಾಗಿದೆ. ಅದೇ ರೀತಿ ತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಜೊತೆಗಿದ್ದ ಸಂಘರ್ಷಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ತೆರೆ ಎಳೆದಂತೆ ಕಾಣುತ್ತಿದೆ.
ಸಂಸದೆ ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ, ನಮ್ಮಿಬ್ಬರ ನಡುವಿನ ಸಂಘರ್ಷವನ್ನು ಮುಂದುವರಿಸಿಕೊಂಡು ಹೋಗಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರ ಸ್ನೇಹದ ಜೊತೆಗೆ ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.
ಲೋಕಸಭೆ ಚುನಾವಣೆ ಸಂಬಂಧ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕಾರ್ಯಕರ್ತರ ಸಂಗ್ರಹ ಸಭೆಯಲ್ಲಿ ಮಾತನಾಡಿದ ಅವರು, “ಅಂಬರೀಶ್ ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ನಾನು ಸಿಎಂ ಆಗಿದ್ದಾಗಲೇ ರಾಜ್‌ಕುಮಾರ್, ಅಂಬರೀಶ್ ನಿಧನರಾದರು. ರಾಜ್ಕುಮಾರ್ ಸಮಾಧಿ ಮಾಡಿದ್ದು ನಾನು. ಅಂಬರೀಶ್ ಸಮಾಧಿಗೂ ಜಾಗ ಗುರುತಿಸಿ, ಗೌರವ ಕೊಟ್ಟಿದ್ದೇನೆ” ಎಂದು ಹೇಳಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಸುಮಲತ ಅವರ ರಾಜಕೀಯವನ್ನು ಅಂತ್ಯ ಮಾಡಿರುವ ದಳಪತಿ ನಾಯಕರ ನಡೆ ಜಾಣ್ಮೆ ಇದಿದ್ದು, ಕ್ಷೇತ್ರ ಕಳೆದುಕೊಂಡಿರುವ ಸುಮಲತ ಅವರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.