ಬೆಂಗಳೂರು: ಖ್ಯಾತ ನಟ, ನಿರ್ದೇಶಕ, ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಟ್ಟೆ ಉರಿಯಿಂದ (ಅಸಿಡಿಟಿ) ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಧ್ಯ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲಎಂದು ಅವರ ಕುಟುಂಬದ ಮೂಲಗಳು ಖಚಿತಪಡಿಸಿವೆ.
ಯುಐ ಸಿನಿಮಾದ ಶೂಟಿಂಗ್ ಸಮಯದಲ್ಲೂ ಉಪೇಂದ್ರ ಇದೇ ಸಮಸ್ಯೆಯನ್ನು ಎದುರಿಸಿದ್ದರು. ಉಪೇಂದ್ರ ಅವರು ನಿರ್ದೇಶಿಸಿ ನಟಿಸಿದ್ದ ‘ಯುಐ’ ಸಿನಿಮಾ ಕಳೆದ ಡಿಸೆಂಬರ್‌ನಲ್ಲಿ ತೆರೆಗೆ ಬಂದಿತ್ತು. ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ತಕ್ಕಮಟ್ಟಿಗೆ ಸದ್ದು ಮಾಡಿತ್ತಾದರೂ ಕೊಳ್ಳೆ ಹೊಡೆಯುವಲ್ಲಿ ಸೋತಿತ್ತು.
ಇವರ ಅಭಿನಯದ ಅರ್ಜುನ್ ಜನ್ಯಾ ಚೊಚ್ಚಲ ನಿರ್ದೇಶನದ ಸಿನಿಮಾ 45 ಟೀಸರ್ ಯುಗಾದಿ ಹಬ್ಬದ ದಿನದಂದು ನಗರದ ಓರಾಯನ್ ಮಾಲ್ ನಲ್ಲಿ ಅವರಣಗೊಳಿಸಲಾಗಿತ್ತು. ಈ ಚಿತ್ರಕ್ಕೆ ರಮೇಶ್ ರೆಡ್ಡಿ ಬಂಡವಾಳ ಹೂಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಮತ್ತು ರಾಜ್ ಬಿ ಶೆಟ್ಟಿ ಅವರೂ ನಟಿಸಿದ್ದಾರೆ.