Saturday, July 27, 2024

ಆರೋಗ್ಯದಲ್ಲಿ ಮತ್ತೆ ಏರುಪೇರು: ಸಂಸದ ರಮೇಶ್ ಜಿಗಜಿಣಗಿ ಆಸ್ಪತ್ರೆಗೆ ದಾಖಲು

Most read

ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಬೆಳಗಾವಿ ನಗರದ ಕೆ.ಎಲ್.ಇ. ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರ್ಯಕ್ರಮದ ಸಲುವಾಗಿ ಶನಿವಾರ ಬೆಳಗಾವಿಗೆ ತೆರಳಿದ್ದ ರಮೇಶ್ ಜಿಗಜಿಣಗಿಯವರಿಗೆ ರಾತ್ರಿ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೆ.ಎಲ್.ಇ. ಆಸ್ಪತ್ರೆಗೆ ದಾಖಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ರಮೇಶ್ ಜಿಗಜಿಣಗಿಯವರನ್ನು ಶನಿವಾರ ತಡ ರಾತ್ರಿ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಮೊದಲು ಅವರಿಗೆ ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

More articles

Latest article