ಮೈಸೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಆರೋಗ್ಯಾಧಿಕಾರಿ ಸಾವು

ಡೆಂಗ್ಯೂ ಜ್ವರಕ್ಕೆ ಸಮುದಾಯ ಆರೋಗ್ಯಾಧಿಕಾರಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಮೃತಪಟ್ಟ ಅಧಿಕಾರಿ ನಾಗೇಂದ್ರ (32) ಎಂದು ತಿಳಿದುಬಂದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಡೆಂಗ್ಯೂಗೆ 35 ವರ್ಷದ ನಾಗೇಂದ್ರ ಮೃತ ಪಟ್ಟಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ ಎಂದು ತಿಳಿದುಬಂದಿದೆ. ಹುಣಸೂರು ತಾಲ್ಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಾಗೇಂದ್ರ ಕಳೆದ ಸೋಮವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಆದರೆ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಮೈಸೂರು ಜಿಲ್ಲೆಯಲ್ಲಿ ಸದ್ಯಕ್ಕೆ 479 ಡೆಂಗ್ಯೂ ಸಕ್ರಿಯ ಪ್ರಕರಣಗಳು ಇವೆ.

More articles

Latest article

Most read