ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ

ಬೆಂಗಳೂರು :  ನಗರದ  ಹಲವೆಡೆ ನಿನ್ನೆ ಸಂಜೆ  ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆ ನೇರಳೆ ಮೆಟ್ರೋ  ಮಾರ್ಗವೊಂದರಲ್ಲಿ ರೈಲು ಸಂಚಾರ ವ್ಯತ್ಯಯಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ.

ನಗರದಲ್ಲಿ ಬೀಸುತ್ತಿರುವ ಭಾರಿ ಗಾಳಿಯ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಐಟಿಪಿಎಲ್  ಮತ್ತು ಸತ್ಯಸಾಯಿ ಪ್ರಶಾಂತ್ ನಿಲಯಂ ಮೆಟ್ರೋ ನಿಲ್ದಾಣಗಳ ನಡುವಿನ ಹಳಿಯ ಮೇಲೆ ಮರದ ಕೊಂಬೆ ಬಿದ್ದಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ವೈಟ್‌ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಗರುಡಾಚಾರ್ ಪಾಳ್ಯ ಮತ್ತು ಚಲ್ಲಘಟ್ಟ ನಡುವಿನ ನೇರಳೆ ಮಾರ್ಗದ  ರೈಲುಗಳ ಸಂಚಾರ ಎಂದಿನಂತೆ ಮುಂದುವರಿದಿತ್ತು.

ಆರಂಭದಲ್ಲಿ ಟೌನ್ ಹಾಲ್, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ವಿಧಾನಸೌಧ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೆಜೆಸ್ಟಿಕ್, ಯಶವಂತಪುರ ಹಾಗೂ ವಿಧಾನಸೌಧ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಜೋರು ಮಳೆ ದಾಖಲಾಗುತ್ತಿದೆ. ಕಚೇರಿ ಮುಗಿಸಿ ಮನೆಗೆ ಮರಳುವ ಸಮಯದಲ್ಲಿ ಮಳೆ ಶುರುವಾಗಿರುವುದರಿಂದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು.

ರಾಜಧಾನಿಯಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಬೆಂಗಳೂರು ನಗರಕ್ಕೆ ಇಂದಿಗೆ ‘ಯಲ್ಲೋ ಅಲರ್ಟ್’  ಘೋಷಿಸಿದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಮರಗಳ ಕೆಳಗೆ ನಿಲ್ಲದಂತೆ ಮತ್ತು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

More articles

Latest article

Most read