ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ : ಹವಾಮಾನ ಇಲಾಖೆ ಸೂಚನೆ

Most read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮತ್ತೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದೆ. ಆದರೀಗ ಮತ್ತೆ ಶುರುವಾಗುವ ಸಾಧ್ಯತೆ ಇದೆ. ಇಂದಿನಿಂದ ಜುಲೈ 15ರ ವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 12ಕ್ಕೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ಜುಲೈ 13 ರಿಂದ 15ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜುಲೈ 15ರ ವರೆಗೆ ಉತ್ತರ ಒಳನಾಡು ಪ್ರದೇಶದ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಈ ಎಲ್ಲಾ ಜಿಲ್ಲೆಗಳಲ್ಲೂ 4 ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಭಾರಿ ಗಾಳಿ ಸಮೇತ ಮಳೆ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

More articles

Latest article