ಮುಂಗಾರು ಮಳೆ : ನಾಳೆಯಿಂದ ಐದು ಜಿಲ್ಲೆಗಳಲ್ಲಿ ಮಳೆ ಆರ್ಭಟ, ರೆಡ್‌ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಾದ್ಯಂತ ನೈಋತ್ಯ ಮಾನ್ಸೂನ್ ತೀವ್ರಗೊಳ್ಳುತ್ತಿರುವುದರಿಂದ, ಇಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದ್ದು, ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಮಧ್ಯ ಕರ್ನಾಟಕದಲ್ಲೂ ಮಳೆಯ ಆರ್ಭಟ ಶುರುವಾಗಿದೆ.  ಮುಂಗಾರು ಆರಂಭದಲ್ಲೇ ಬಳ್ಳಾರಿ ನಗರದಲ್ಲಿ 95 ಮಿ.ಮೀ. ಹಾಗೂ ಶ್ರೀಧರ ಗಡ್ಡೆ ಗ್ರಾಮದಲ್ಲಿ 101 ಮಿ.ಮೀ. ಮಳೆಯಾಗಿದ್ದು, ಈ ವರ್ಷದ ಆರಂಭದಲ್ಲೇ ಮಳೆರಾಯ ದಾಖಲೆ  ಮಳೆಯಾಗಿದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ – ಐದು ಜಿಲ್ಲೆಗಳಿಗೆ ಮಂಗಳವಾರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಬುಧವಾರ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ವಿಸ್ತರಿಸಲಾಗಿದೆ.

ಐಎಂಡಿ ಪ್ರಕಾರ, ಆಯಾ ದಿನಗಳಲ್ಲಿ ಬೆಳಿಗ್ಗೆ 8.30 ರಿಂದ 24 ಗಂಟೆಗಳ ಕಾಲ ಎಚ್ಚರಿಕೆ ಜಾರಿಯಲ್ಲಿರುತ್ತದೆ. 24 ಗಂಟೆಗಳ ಒಳಗೆ 20 ಸೆಂ.ಮೀ ಗಿಂತ ಹೆಚ್ಚಿನ ಭಾರೀ ಮಳೆಯಾಗುವ ಸಾಧ್ಯತೆಯನ್ನು ರೆಡ್ ಅಲರ್ಟ್ ಸೂಚಿಸುತ್ತದೆ.

ಮುಂದಿನ ದಿನಗಳಲ್ಲಿ ಭಾರೀ ಮಳೆ ಚಟುವಟಿಕೆ ತೀವ್ರಗೊಳ್ಳುವ ನಿರೀಕ್ಷೆಯಿರುವುದರಿಂದ ಪೀಡಿತ ಜಿಲ್ಲೆಗಳ ನಿವಾಸಿಗಳು ಜಾಗರೂಕರಾಗಿರಲು ಅಧಿಕಾರಿಗಳು ಸೂಚಿಸಿದ್ದಾರೆ.

ಬಿರುಗಾಳಿಯೊಂದಿಗೆ ಭಾರಿ ಮಳೆ: ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಹೆಚ್ಚಿರಲಿದ್ದು,  ರಾಯಚೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಮತ್ತು ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

More articles

Latest article

Most read