ದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆ: ಕೆರೆಯಂತಾದ ಹೊನ್ನಾಳಿ ತಾಲೂಕು ಆಸ್ಪತ್ರೆ

ದಾವಣಗೆರೆ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಹೊನ್ನಾಳಿಯ ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ನೀರು ನುಗ್ಗಿ ಕೆರೆಯಂತಾಗಿದೆ. ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ.

ಜನರಲ್ ವಾರ್ಡ್, ಐಸಿಯು ವಾರ್ಡ್‌, ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿ, ಔಷಧ ವಿತರಣಾ ಕೊಠಡಿ, ಹೆರಿಗೆ ವಾರ್ಡ್‌ಗೆ ನೀರು ನುಗ್ಗಿದ್ದು ಇಡೀ ಆಸ್ಪತ್ರೆ ಸಂಪೂರ್ಣ ಜಲಾವೃತವಾಗಿದೆ. ವಾರ್ಡ್‌ನಲ್ಲಿದ್ದ ಬಾಣಂತಿಯರು ಹಾಗೂ ಐಸಿಯು ಘಟಕದಲ್ಲಿನ ರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ.

ಸರಿಯಾದ ರೀತಿ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕ್ರೀಡಾಂಗಣದಿಂದ ಆಸ್ಪತ್ರೆಗೆ ನೀರು ಹರಿದಿದೆ. ರಾತ್ರಿಯಿಡಿ ಆಸ್ಪತ್ರೆಯನ್ನು ಸಿಬ್ಬಂದಿ ಕ್ಲೀನ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ.

More articles

Latest article

Most read