ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಮತ್ತೆ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತಿದ್ದು ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.
ದಕ್ಷಿಣ ದೆಹಲಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಗಾಗಿ ‘ರೆಡ್ ಅಲರ್ಟ್’ ಮತ್ತು ಸಾಧಾರಣ ಮಳೆಗಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ; ಜೊತೆಗೆ ನಗರದ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ತನ್ನ ಸಲಹೆಯಲ್ಲಿ, ಆಗ್ನೇಯ ದೆಹಲಿ, ಪೂರ್ವ ದೆಹಲಿ, ಶಾಹದಾರಾ, ಮಧ್ಯ ದೆಹಲಿ, ಈಶಾನ್ಯ ದೆಹಲಿ, ದಕ್ಷಿಣ ದೆಹಲಿ, ನವದೆಹಲಿ, ನೈಋತ್ಯ ದೆಹಲಿ, ಪಶ್ಚಿಮ ದೆಹಲಿ, ವಾಯುವ್ಯ ದೆಹಲಿ ಮತ್ತು ಉತ್ತರ ದೆಹಲಿಯ ಕೆಲವು ಭಾಗಗಳಲ್ಲಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಸಿಡಿಲು ಮತ್ತು ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಲ್ಲದೆ, ಮಧ್ಯ ದೆಹಲಿ, ದಕ್ಷಿಣ ದೆಹಲಿ, ನೈಋತ್ಯ ದೆಹಲಿ, ಪಶ್ಚಿಮ ದೆಹಲಿ, ವಾಯುವ್ಯ ದೆಹಲಿ ಮತ್ತು ಉತ್ತರ ದೆಹಲಿಯ ಭಾಗಗಳಲ್ಲಿನ ಅನೇಕ ಸ್ಥಳಗಳಲ್ಲಿ ಗುಡುಗು, ಸಿಡಿಲು ಮತ್ತು ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಹವಾಮಾನ ಮುನ್ಸೂಚನೆ ಸಂಸ್ಥೆ ‘ಇಂಡಿಯಾ ಮೆಟ್ ಸ್ಕೈ’ ಪ್ರಕಾರ, ಮುಂದಿನ ಎರಡು ಗಂಟೆಗಳಲ್ಲಿ ಗಾಜಿಯಾಬಾದ್, ಪೂರ್ವ ದೆಹಲಿ, ನೋಯ್ಡಾ, ಗುರುಗ್ರಾಮ, ದೆಹಲಿ ಮತ್ತು ದಕ್ಷಿಣ ದೆಹಲಿಯ ಕೆಲವು ಭಾಗಗಳು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮಿಂಚು ಮತ್ತು ಗಂಟೆಗೆ 25 ಕಿ.ಮೀ.ವರೆಗಿನ ವೇಗದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ ದೆಹಲಿಯಲ್ಲಿ ಮತ್ತೆ ಮಳೆ ಅಬ್ಬರ, ಸಂಚಾರಕ್ಕೆ ತೀವ್ರ ಆಡಚಣೆ