ನವದೆಹಲಿ: ಶುಕ್ರವಾರ ಬೆಳಿಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಗಾಳಿ, ಗುಡುಗು ಸಿಡಲಿನೊಂದಿಗೆ ಧಾರಕಾರ ಸುರಿದ ಭಾರೀ ಮಳೆಯಿಂದಾಗಿ ದೆಹಲಿಯ ನಜಾಫ್‌ಗಢದಲ್ಲಿ ಮನೆ ಕುಸಿದು 28 ವರ್ಷದ ಮಹಿಳೆ ಮತ್ತು ಅವರ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿಯನ್ನು ತಿಳಿಸಿದ್ದಾರೆ.
ನಗರದಲ್ಲಿ ಮಳೆಯೊಂದಿಗೆ ಬೀಸಿದ ಬಲವಾದ ಗಾಳಿಯಿಂದಾಗಿ ಮನೆ ಕುಸಿದು ಬಿದ್ದಿದೆ. ಹಾಗೆಯೇ ಒಂದು ಕುಟುಂಬದಲ್ಲಿ ಒಬ್ಬ ಮಹಿಳೆ, ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನು ಬದುಕುಳಿದವರು ಏಕೈಕ ಪತಿ ಮಾತ್ರ ಎಂದು ಅವರು ಹೇಳಿದ್ದಾರೆ.
ಈ ಘಟನೆಯಲ್ಲಿ ಮಹಿಳೆಯ ಪತಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಲ್ಲಿನ ಪೊಲೀಸರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಪ್ರಾಣ ಹಾನಿಯಾದ ತಾಯಿ ಮತ್ತು ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಅಧಿಕಾರಿಗಳು ಆ ಕುಟುಂಬಗಳಿಗೆ ಪರಿಹಾರವನ್ನು ಒದಗಿಸಬೇಕು.