ಆಗಸ್ಟ್ 3ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Most read

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉಡುಪಿ ಭಾಗದಲ್ಲಿ ಮುಂದಿನ ಆಗಸ್ಟ್ 3 ವರೆಗೂ ವ್ಯಾಪಕ ಮಳೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಭಾಗದಲ್ಲಿ ಎರಡು ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ‌ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಭಾಗದಲ್ಲಿ ಸಹ ಈ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಭಾಗದಲ್ಲೂ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಿರಂತರ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ. ಕರಾವಳಿಯ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆಯಿದೆ. ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

More articles

Latest article