ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ದೆಹಲಿ ಬರುವಂತೆ ಕರೆ ಮಾಡಿದ್ದಾರೆ.
ಇಬ್ಬರು ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಲಿದ್ದಾರೆ. ಹೆಚ್ಎಎಲ್ ಏರ್ಪೋರ್ಟ್ನಿಂದ ಸಂಜೆ 7 ಗಂಟೆಗೆ ದೆಹಲಿಗೆ ಹೊರಡಲಿದ್ದಾರೆ. ಡಿಸಿಎಂ ಡಿಕೆಶಿ ಕೂಡ ಸಂಜೆಯೇ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು, ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಸೇರಿದಂತೆ ಯಾವುದೇ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ, ರಾಹುಲ್ ಗಾಂಧಿ ಅವರೇ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ನಾಳೆ 11 ಗಂಟೆಗೆ ಹೈಕಮಾಂಡ್ ಪ್ರಶ್ನೆ ಪತ್ರಿಕೆ ಕೊಡುತ್ತೆ. ಆ ಬಳಿಕ ಪ್ರಶ್ನೆಗೆ ಉತ್ತರ ಟಿಕ್ ಮಾಡ್ತಾರೆ. ಮೊದಲೇ ಪ್ರಶ್ನೆ ಪತ್ರಿಕೆ ಲೀಕ್ ಮಾಡಲ್ಲ ಬಿಡಿ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.

