ಜೀವಾವಧಿ ಶಿಕ್ಷೆ ಪ್ರಶ್ನಿಸಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಂಗೀಕಾರ

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಕರಣದ 15ನೇ ಅಪರಾಧಿಳಾಗಿರುವ ಶಾಸಕ ವಿನಯ್ ಕುಲಕರ್ಣಿ ಹಾಗೂ ಚಂದ್ರಶೇಖರ್ ಇಂಡಿ ಅವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ಹೈಕೋರ್ಟ್, ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣ ಸಂಬಂಧ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ಟಿ. ನಾಯಕ್ ಅವರಿದ್ದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರ ಮತ್ತು ಸಿಬಿಐ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಅರ್ಜಿಯನ್ನು ರಜಾ ಕಾಲದ ಪೀಠದಲ್ಲಿ ವಿಚಾರಣೆಗೆ ಮನವಿ ಮಾಡುವುದಕ್ಕೆ ಅನುಮತಿ ನೀಡಿದೆ.

ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ವಿನಯ್ ಕುಲಕರ್ಣಿ ಪರ ವಕೀಲರು, ಇದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಆಧರಿಸಿ, ಆರೋಪಿಗಳಿಗೆ ವಿಚಾರಣಾ ಹಂತದಲ್ಲಿಯೇ ಜಾಮೀನು ಮಂಜೂರು ಮಾಡಿತ್ತು. ಆದ್ದರಿಂದ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ, ದಾಖಲೆಗಳನ್ನು ತರಲು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಸಿಬಿಐ ಪರ ವಕೀಲರು, ವಿಚಾರಣಾ ನ್ಯಾಯಾಲಯದ ಆದೇಶ 680 ಪುಟಗಳಷ್ಟಿದೆ. ಆಕ್ಷೇಪಣೆ ಸಲ್ಲಿಸುವುದಕ್ಕೆ ನಾಲ್ಕು ವಾರಗಳ ಕಾಲ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ ಪೀಠ, ಅರ್ಜಿ ಇದೇ ಮೊದಲ ಬಾರಿ ವಿಚಾರಣೆಗೆ ಬರುತ್ತಿದೆ. ಪ್ರತಿವಾದಿಗಳಾಗಿರುವ ಸಿಬಿಐ ಪರ ವಕೀಲರು ವಾದ ಆಲಿಸಬೇಕಾಗಿದೆ ಎಂದು ತಿಳಿಸಿತು. ಅಲ್ಲದೆ, ರಜಾ ಕಾಲದ ಪೀಠದಲ್ಲಿ ವಿಚಾರಣೆಗೆ ಮನವಿ ಮಾಡಬಹುದಾಗಿದೆ ಎಂದು ತಿಳಿಸಿ ವಿಚಾರಣೆಯನ್ನು ಮುಂದೂಡಿತು.

ಪ್ರಕರಣದ ಹಿನ್ನೆಲೆ: 2016ರ ಜೂನ್‌ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಿಮ್ನಲ್ಲಿ ಯೋಗೇಶ್‌ ಗೌಡ ಕೊಲೆ ನಡೆದಿತ್ತು. ಬೆಳಗ್ಗೆ ಜಿಮ್ನಲ್ಲಿ‌ ನ್ಯೂಸ್ ಪೇಪರ್ ಓದುತ್ತಿರುವಾಗಲೇ ಕೊಲೆ ನಡೆದಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸರೇ ತನಿಖೆ ನಡೆಸಿದ್ದರು

ತನಿಖೆ ನಡೆಸಿದ ಉಪನಗರ ಪೊಲೀಸರು ಬಿ‌ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. 2019ರಲ್ಲಿ ವಿನಯ್ ಕುಲಕರ್ಣಿ ಸಾಕ್ಷಿ ನಾಶಪಡಿಸಿದ್ದಾರೆಂದು ಯೋಗೇಶ್ ಗೌಡ ಕುಟುಂಬಸ್ಥರು ಹೈಕೋರ್ಟ್ ಮೊರೆ ಹೋಗಿದ್ದರು. ಆ ವೇಳೆ ಹೈಕೋರ್ಟ್ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ದರು.

More articles

Latest article

Most read