ಅಕ್ರಮ ಅಸ್ತಿ ಪ್ರಕರಣ: ಸಿಬಿಐ, ಯತ್ನಾಳ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಕೆಶಿ​​ಗೆ ಬಿಗ್ ರಿಲೀಫ್

Most read

ಡಿಕೆಶಿ ವಿರುದ್ಧಧ ಅಕ್ರಮ ಆಸ್ತಿ ಗಳಿಕೆ ಕೇಸ್‌ಗೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿ . ಕೆ.ಸೋಮಶೇಖರ್, ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ. 

ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದ ಬಗ್ಗೆ ನಿರ್ಣಯಿಸದೇ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಸೂಕ್ತ ಎಂದಿದೆ. ಹೀಗಾಗಿ ಅಂತಿಮವಾಗಿ ಸುಪ್ರೀಂಕೋರ್ಟ್ ಈ ಬಗ್ಗೆ ತೀರ್ಮಾನಿಸಬೇಕಿದೆ. ಇನ್ನು ಸಿಬಿಐ ಮತ್ತು ಯತ್ನಾಳ ಅರ್ಜಿಗಳನ್ನು ವಜಾ ಮಾಡಿದ ಹೈಕೋರ್ಟ್, ಅರ್ಜಿದಾರರು ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂಕೋರ್ಟ್‌ಗೆ ಹೋಗಲಿದೆ. ಸಿಬಿಐ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ತನಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್‌ ಸಿಕ್ಕಂತಾಗುತ್ತದೆ.

More articles

Latest article