ಬೇಲೆಕೇರಿ ಪ್ರಕರಣ : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

Most read

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಅಪರಾಧಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರೋಪಿಗಳಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್​ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶಿಸಿದೆ.

ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಆರೋಪಿಗಳಿಗೆ ಒಟ್ಟು ಆರು ಪ್ರಕರಣಗಳಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಈಗ ದಂಡದ ಮೊತ್ತದಲ್ಲಿ ಶೇ.25ರಷ್ಟು ಠೇವಣಿ ಕೋರ್ಟ್​​ನಲ್ಲಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತಿನಲ್ಲಿಟ್ಟು ಆದೇಶಿಸಿದೆ.

ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಪ್ರಶ್ನಿಸಿ ಆರೋಪಿಗಳ ಪರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜನ ಪ್ರತಿನಿಧಿ ಕೋರ್ಟ್​ ನೀಡಿದ್ದ ಶಿಕ್ಷೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ನಾಳೆ (ನವೆಂಬರ್ 14) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಕೇಸ್‌ ಏನು?

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಶಾಸಕ ಸತೀಶ್​ ಸೈಲ್​​ ಸೇರಿದಂತೆ ಏಳು ಅಪರಾಧಿಗಳಿಗೆ ಶಿಕ್ಷಿ ವಿಧಿಸಿ ತೀರ್ಪು ನೀಡಿತ್ತು. ಈ ಪ್ರಕರಣದಲ್ಲಿ ಶಾಸಕ ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿತ್ತು. ಇದಲ್ಲದೆ ಉಳಿದ 5 ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ವಿಧಿಸಿತ್ತು. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ನೀಡಲಾಗಿತ್ತು.

More articles

Latest article