ಶ್ರೇಯಸ್ ಪಟೇಲ್​ಗೆ ಹೈಕೋರ್ಟ್​ ನೋಟಿಸ್​ : ಕಾರಣವೇನು?

Most read

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್ ಅವರು ಸಲ್ಲಿಸಿದ್ದು, ವಿಚಾರಣೆ ನಡೆಸಿ ಈಗ ಹಾಸನ ಕಾಂಗ್ರೆಸ್​ ಸಂಸದ ಶ್ರೇಯಸ್ ಪಾಟೀಲ್​ಗೆ ಕರ್ನಾಟಕ ಹೈಕೋರ್ಟ್​ ನೋಟಿಸ್ ಜಾರಿ ಮಾಡಿದೆ.

ಶ್ರೇಯಸ್‌ ಪಟೇಲ್‌ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ನಿಗದಿಗಿಂತ ಹೆಚ್ಚಿನ ಹಣ ವ್ಯಯಿಸಿದ್ದು, ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹಾಗಾಗಿ ಅವರ ಆಯ್ಕೆಯನ್ನೇ ರದ್ದುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಈಗ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೇಯಸ್ ಪಾಟೀಲ್ಗೆ ನೋಟಿಸ್ ನೀಡಿದೆ.

More articles

Latest article