ಬೆಂಗಳೂರು: ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೊದಲಾದವರು ಭಾಗವಹಿಸಿದ್ದರು.