ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ; ಬಿಜೆಪಿ ಮಾಜಿ ಸಿಎಂಗೆ ಹಿನ್ನೆಡೆ

Most read

ಬೆಂಗಳೂರು: ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆ  (ಪೋಕ್ಸೋ) ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಅವರಿಗೆ ಹಿನ್ನೆಡೆ ಉಂಟಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance) ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ ಮಾಡಿದ್ದ ಫೆಬ್ರವರಿ 28ರ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಆದರೂ ವಿನಾಕಾರಣ ಯಡಿಯೂರಪ್ಪ ಅವರನ್ನು ವಿಚಾರಣೆಗೆ ಕರೆಯುವಂತಿಲ್ಲ ಎಂದು ಹೇಳಿರುವ ಕೋರ್ಟ್‌ ವಿಚಾರಣಾ ನ್ಯಾಯಾಲಯದಲ್ಲಿ ದೋಷಮುಕ್ತರಾಗಲು ಯಡಿಯೂರಪ್ಪ ಅವರಿಗೆ ಸ್ವಾತಂತ್ರ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಯಡಿಯೂರಪ್ಪ ಅವರು ಸಹಾಯ ಕೇಳಲು ಬಂದಾಗ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಸಂತ್ರಸ್ತೆಯ ತಾಯಿ 2024ರ ಮಾರ್ಚ್‌ 14ರಂದು ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಆ ದೂರಿನನ್ವಯ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಸಿಐಡಿ ಪೊಲೀಸರು ಯಡಿಯೂರಪ್ಪ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

More articles

Latest article