ಈ ವರ್ಷ ರಾಜ್ಯದಲ್ಲಿ ಅತ್ಯಧಿಕ ತಾಪಮಾನ

ಭಾರತೀಯ ಹವಾಮಾನ ಎಚ್ಚರಿಕೆ, ಆರೋಗ್ಯ ಇಲಾಖೆಯಿಂದ ಶೀಘ್ರ ಮಾರ್ಗಸೂಚಿ

ಬೆಂಗಳೂರು : ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು  ಈ ಬಾರಿಯ ಬೇಸಿಗೆಯಲ್ಲಿ ಅಧಿಕ ತಾಪಮಾನ ಜನರನ್ನು ಕಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಂಪು ನಗರ ಎಂದು ಕರೆಸಿಕೊಳುವ ರಾಜಧಾನಿ ಬೆಂಗಳೂರು ಸದ್ಯ ಬಿಸಿಲೂರಾಗಿ ಬದಲಾಗಿದೆ. ಕಳೆದ ಒಂದು ವಾರದಿಂದ ರಾಜಧಾನಿಯಲ್ಲಿ ತಾಪಮಾನ ಏರಿಕೆಯಾಗುತ್ತಿದೆ.

ಬಿಸಿಲಿನ ತಾಪ ಕ್ರಮೇಣ ಏರಿಕೆಯಾಗುತ್ತಿದೆ. ಮುಂದಿನ ದಿನದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಪ್ರದೇಶಗಳಲ್ಲಿ  ಇನ್ನಷ್ಟು ತಾಪಮಾನ ಹೆಚ್ಚಾಗಲಿದೆ. ಮಾರ್ಚ್‌ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ  ಬಿಸಿಲಿನ ಬೇಗೆ ತೀವ್ರವಾಗವುದರ ಜೊತೆ ಬಿಸಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಎಚ್ಚರಿಕೆ ನೀಡಿದೆ.

ಮಾರ್ಚ್ 2ನೇ ವಾರದ ಬಳಿಕ ಬೆಂಗಳೂರಿನ ತಾಪಮಾನ 38-39  ಡಿಗ್ರಿ ಸೆಲ್ಸಿಯಸ್‌ ತಲುಪಲಿದೆ. ತಾಪಮಾನ ಹೆಚ್ಚಾಗುವುದರಿಂದ  ಆರೋಗ್ಯ ಇಲಾಖೆ ಈ ಬಗ್ಗೆ ಎಚ್ಚರಿಕೆಯನ್ನು ಜನರಿಗೆ ನೀಡಿದೆ.
 ಉರಿಯುವ ಬಿಸಿಲಿಗೆ ಹೀಟ್ ಸ್ಟ್ರೋಕ್ ಭೀತಿ ಒಂದು ಕಡೆಯಾದರೆ, ಖಾಯಿಲೆ ಹೆಚ್ಚಳ ಆತಂಕ ಶುರವಾಗಿದೆ. ತಾಪಮಾನ ಏರಿಕೆ ಬೆನ್ನಲ್ಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮುಂದಾಗಿದ್ದು, ಹೀಟ್ ಸ್ಟೋಕ್ ಬಗ್ಗೆ ವೈದ್ಯರ ಎಚ್ಚರಿಕೆ ನೀಡುತ್ತಿದ್ದಾರೆ.

ರೋಗಿಗಳಿಗೆ ಎಚ್ಚರಿಕೆ: ಅಂದುಕೊಂಡದಕ್ಕಿಂದ ಈ ಸಲ ಬಿಸಲು ಬೇಗೆ ಹೆಚ್ಚಾಗಿ ಇರಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ಮತ್ತಷ್ಟು ಹಾಟ್ ಆಗಲಿದೆ. ಹೀಗಾಗಿ ಹೈಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ನೀಡಿದೆ.

ದೇಹದ ಉಷ್ಣತೆಯು 40 ಡಿಗ್ರಿ ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟೋಕ್ ಕೂಡಾ ಸಾಧ್ಯತೆ ಇದ್ದು, ಇದು ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಕೆಲವು ದಿನ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ವೈದ್ಯರ ಸಲಹೆ ನೀಡುತ್ತಿದ್ದಾರೆ. ಜೊತೆಗೆ ಹೆಚ್ಷಾಗಿ ನೀರು, ತಂಪು ಪಾನೀಯಗಳು ಸೇರಿದಂತೆ ಡಿಹೈಡ್ರೇಟ್ ಆಗದಂತದ ಆಹಾರವನ್ನ ಹೆಚ್ಚಾಗಿ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಒಟ್ಟಿನಲ್ಲಿ ಈ ವರ್ಷವೂ ಕೂಡ ಬೆಂಗಳೂರು ಮಂದಿಗೆ ಬೇಸಿಗೆಯ ಧಗೆ ಕಾಡಲಿದ್ದು, ಜನರು ಬಿಸಿಲಿನಿಂದ ಉಂಟಾಗುವ ಆರೋಗ್ಯದ ಸಮಸ್ಯೆಯಿಂದ ದೂರ ಇರಲು ಹೆಚ್ಚು ಗಮನ ಹರಿಸಬೇಕಿದೆ. ಜೊತೆಗೆ ಆರೋಗ್ಯ ಇಲಾಖೆಯಿಂದಲೂ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ.

More articles

Latest article

Most read