• ಆಯವ್ಯಯ ಗಾತ್ರ (ಸಂಚಿತ ನಿಧಿ) ೪,೦೯,೫೪೯ ಕೋಟಿ ರೂ.ಗಳು
• ಒಟ್ಟು ಸ್ವೀಕೃತಿ – 4,08,647 ಕೋಟಿ ರೂ.; ರಾಜಸ್ವ ಸ್ವೀಕೃತಿ ೨,೯೨,೪೭೭ ಕೋಟಿ ರೂ.; ಸಾರ್ವಜನಿಕ ಋಣ-೧,೧೬,೦೦೦ ಕೋಟಿ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 1,16,17೦ ಕೋಟಿ ರೂ.
• ಒಟ್ಟು ವೆಚ್ಚ-೪,೦೯,೫೪೯ ಕೋಟಿ ರೂ. ರಾಜಸ್ವ ವೆಚ್ಚ-೩,೧೧,೭೩೯ ಕೋಟಿ ರೂ., ಬಂಡವಾಳ ವೆಚ್ಚ-೭೧,೩೩೬ ಕೋಟಿ ರೂ. ಹಾಗೂ ಸಾಲ ಮರುಪಾವತಿ- ೨೬,೪೭೪ ಕೋಟಿ ರೂ.
• ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ ೪೨,೦೧೮ ಕೋಟಿ ರೂ. ಎಸ್.ಸಿ.ಎಸ್.ಪಿ. ಅಡಿ ೨೯,೯೯೨ ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 1೨,೦೨೬ ಕೋಟಿ ರೂ.
• ಮಹಿಳಾ ಆಯವ್ಯಯದಲ್ಲಿ ಒದಗಿಸಿದ ಅನುದಾನ ೯೪,೦೮೪ ಕೋಟಿ ರೂ.
• ಮಕ್ಕಳ ಆಯವ್ಯಯದಲ್ಲಿ ಒದಗಿಸಿದ ಅನುದಾನ- ೬೨,೦೩೩ ಕೋಟಿ ರೂ.
• ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ 8000 ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ.
ಕೃಷಿ
- ರೈತ ಸಮೃದ್ಧಿ ಯೋಜನೆಯಡಿ ೧೦ ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳ ಅಭಿವೃದ್ಧಿ
- ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ.
- ಹನಿ ಮತ್ತು ತುಂತುರು ನೀರಾವರಿ ಘಟಕ ಅಳವಡಿಕೆಗೆ ಕೃಷಿ ಇಲಾಖೆಯಡಿ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ
- ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ.
- ರಾಜ್ಯದಲ್ಲಿ 6000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
- ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ
- ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
- ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ.
- ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
- ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.
- 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್ಗಳ ಸ್ಥಾಪನೆ; ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
- ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ.
- ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್ ಸೌಲಭ್ಯ.
- ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
- ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ
ತೋಟಗಾರಿಕೆ - 95 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಜಾರಿ.
- ತೋಟಗಾರಿಕಾ ಬೆಳೆಗಳ ಕುರಿತು ರೈತರಿಗೆ ನೈಜ ಸಮಯದ ಮಾಹಿತಿ ನೀಡುವ ಜ್ಞಾನಕೋಶ ಸ್ಥಾಪನೆ.
- ರಾಜ್ಯದ GI ಟ್ಯಾಗ್ ಹೊಂದಿದ ಹಾಗೂ ದೇಸಿ ತೋಟಗಾರಿಕಾ ಬೆಳೆಗಳನ್ನು ಸಂರಕ್ಷಿಸಲು ಬೀಜ ಬ್ಯಾಂಕ್ ಸ್ಥಾಪನೆ.
- ಬ್ಯಾಡಗಿ ಮೆಣಸಿನಕಾಯಿಯನ್ನು ರೋಗಗಳಿಂದ ಸಂರಕ್ಷಿಸಲು ಸಂಶೋಧನೆಗೆ ಉತ್ತೇಜನ.
- ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿಯಡಿ ೫೨,೦೦೦ ಬೆಳೆಗಾರರಿಗೆ ೪೨೬ ಕೋಟಿ ಸಹಾಯಧನ ಒದಗಿಸಲು ಕ್ರಮ
- ಇಲಾಖೆಯ ಕ್ಷೇತ್ರಗಳಡಿ ತೋಟಗಾರಿಕಾ ಪ್ರವಾಸೋದ್ಯಮಕ್ಕೆ ಉತ್ತೇಜನ
- ಗದಗ ಜಿಲ್ಲೆಯ ಡಂಬಳದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ.
ರೇಷ್ಮೆ - ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ
- ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿ ಅನುಷ್ಠಾನಕ್ಕೆ 250 ಕೋಟಿ ರೂ.
- ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಾಪನೆಗೆ ಕ್ರಮ.
- ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣಕ್ಕಾಗಿ Assayer ಗಳ ನಿಯೋಜನೆ
- ರೇಷ್ಮೆ ಅಭಿವೃದ್ಧಿ ಯೋಜನೆಗೆ 55 ಕೋಟಿ ರೂ. ಅನುದಾನ
ಪಶುಸಂಗೋಪನೆ - “ಅನುಗ್ರಹ” ಯೋಜನೆಯಡಿ ಪರಿಹಾರ ಮೊತ್ತ ಹೆಚ್ಚಳ; ಹಸು, ಎಮ್ಮೆ ಮತ್ತು ಎತ್ತುಗಳಿಗೆ 15 ಸಾವಿರ ರೂ., ಕುರಿ/ ಮೇಕೆಗಳಿಗೆ 7500 ರೂ., ಕುರಿ/ ಮೇಕೆ ಮರಿಗಳಿಗೆ 5 ಸಾವಿರ ರೂ. ಗಳಿಗೆ ಹೆಚ್ಚಳ.
- 50 ನೂತನ ಪಶು ಚಿಕಿತ್ಸಾಲಯಗಳ ಪ್ರಾರಂಭಕ್ಕೆ ಕ್ರಮ.
- 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳ ನಿರ್ಮಾಣ
- ರಾಜ್ಯದ ದೇಶಿ ದನ ಹಾಗೂ ಕುರಿ ತಳಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಎರಡು ಕೋಟಿ ರೂ.
ಮೀನುಗಾರಿಕೆ - ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜು ವಿದ್ಯಾರ್ಥಿಗಳ ಸಂಖ್ಯಾಬಲ ದ್ವಿಗುಣ
- ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳ ಅಭಿವೃದ್ಧಿಗೆ 30 ಕೋಟಿ ರೂ.
- ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಗೆ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು.
- ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಮೀರಿದ ಇಂಜಿನ್ ಬದಲಾವಣೆಗೆ ಗರಿಷ್ಠ ಒಂದು ಲಕ್ಷ ರೂ. ಸಹಾಯಧನ.
- ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ “ಮಲ್ಟಿ ಲೆವಲ್ ಪಾರ್ಕಿಂಗ್” ವ್ಯವಸ್ಥೆ ನಿರ್ಮಾಣ
- ಆಳ ಸಮುದ್ರ ಮೀನುಗಾರಿಕೆ ಪ್ರೋತ್ಸಾಹಿಸಲು ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಸಲು ಕ್ರಮ
- ರಾಜ್ಯದಲ್ಲಿ ಹೊಸ ಮೀನುಗಾರಿಕಾ ನೀತಿ ಜಾರಿ
ಸಹಕಾರ - 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲ ವಿತರಣೆ ಗುರಿ.
- 3 ಸಾವಿರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಸಂಪೂರ್ಣ ಗಣಕೀಕರಣಕ್ಕೆ ಕ್ರಮ.
- ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ರಾಜ್ಯ ಸರ್ಕಾರದ ವತಿಯಿಂದ ಕ್ವಿಂಟಾಲ್ಗೆ 450 ರೂ. ಗಳಂತೆ ಒಟ್ಟು 138 ಕೋಟಿ ರೂ. ಹೆಚ್ಚುವರಿ ಪ್ರೋತ್ಸಾಹಧನ
- ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಲು 47 ಕೋಟಿ ರೂ. ಅನುದಾನ.
- ಎಪಿಎಂಸಿಗಳಲ್ಲಿನ ಪರವಾನಿಗೆ ಹೊಂದಿದ ಶ್ರಮಿಕರ ಮರಣಾನಂತರದ ವಿಮಾ ಪರಿಹಾರ ಮೊತ್ತ ಐದು ಲಕ್ಷ ರೂ.ಗಳಿಗೆ ಹೆಚ್ಚಳ.
- ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಸ್ಥಾಪನೆ.
- ಬೆಂಗಳೂರು ಹಾಗೂ ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪನೆ.
- ಕಲಬುರಗಿಯಲ್ಲಿ ನೂತನ ಮೆಗಾ ಡೈರಿ ಪ್ರಾರಂಭಿಸಲು 50 ಕೋಟಿ ರೂ. ಅನುದಾನ ಹಾಗೂ 10 ಕೋಟಿ ರೂ. ವೆಚ್ಚದಲ್ಲಿ ಸಹಕಾರ ಭವನ ನಿರ್ಮಾಣ.
- ಕಲ್ಯಾಣ ಕರ್ನಾಟಕದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಉಗ್ರಾಣಗಳ ನಿರ್ಮಾಣ.