ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಾಡಿದ ಭಾಷಣದ ಮುಖ್ಯಾಂಶಗಳು

Most read

ಅವಿಷ್ಕಾರ’ ಎನ್ನುವ ಸಮಗ್ರ ಶಾಲಾ ಅಭಿವೃದ್ಧಿ ಯೋಜನೆಯನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಜಾರಿಗೆ ತರಲಾಗಿದೆ. ಈ ಸಂಬಂಧ ರೂ.700 ಕೋಟಿ ಅನುದಾನ 18 ಮೀಸಲಿರಿಸಲಾಗಿದೆ. ರಾಜ್ಯದ ಪ್ರತಿ ಶಾಲೆಗೆ ಉಚಿತ ವಿದ್ಯುತ್ ಹಾಗೂ ನೀರಿನ ಸೌಲಭ್ಯ ಒದಗಿಸಲಾಗಿದ್ದು, ಇದರಿಂದ ಸ್ಮಾರ್ಟ್ ಕ್ಲಾಸ್ ಹಾಗೂ ಸಂಜೆ ತರಗತಿಗಳನ್ನು ನಡೆಸಲು ಉಪಯುಕ್ತವಾಗಿದೆ. ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ ಆಯ 89 ಸರ್ಕಾರಿ ಕಾಲೇಜುಗಳ ಸುಮಾರು 30,000 ವಿದ್ಯಾರ್ಥಿಗಳಿಗೆ “ಕಲಿಕೆ ಜೊತೆ ಕೌಶಲ್ಯ” ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ನೀಡಲಾಗಿದೆ. ಶಿಕ್ಷಣ ಇಲಾಖೆಯ ವತಿಯಿಂದ ರೂ.277 ಕೋಟಿ ವೆಚ್ಚದಲ್ಲಿ 101 ಹೊಸ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. “ಯುವನಿಧಿ ಯೋಜನೆ ಅಡಿಯಲ್ಲಿ 2,23,883 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 1,65,014 ಅರ್ಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. 55. ಇಂಡಿಯಾ ಸ್ಕಿಲ್ 2024 ರಲ್ಲಿ, 45 ಕೌಶಲ್ಯಗಳಲ್ಲಿ ಭಾಗವಹಿಸಿದ್ದ 62 ಅಭ್ಯರ್ಥಿಗಳ ಪೈಕಿ ಕರ್ನಾಟಕವು 48 ಪದಕಗಳನ್ನು ಗಳಿಸಿ ದೇಶದಲ್ಲಿ ಎರಡನೇ ಸ್ಥಾನ ಗಳಿಸಿದೆ. ವಿಶ್ವ ಕೌಶಲ್ಯ-2024 ರಲ್ಲಿ 52 ಕೌಶಲ್ಯಗಳಲ್ಲಿ ಭಾಗವಹಿಸಿದ್ದ 60 ಅಭ್ಯರ್ಥಿಗಳ ಪೈಕಿ ಕರ್ನಾಟಕವು 4 ಪದಕಗಳನ್ನು ಗೆದ್ದಿದೆ.

ನನ್ನ ಸರ್ಕಾರವು ಜನರ ವಸತಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 3.05 ಲಕ್ಷ ಮನೆಗಳನ್ನು 4761.15 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೆರವು ನೀಡಿದೆ. 4096 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಸಿದ್ಧಪಡಿಸುತ್ತಿರುವ 1.23 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮವಹಿಸುತ್ತಿದೆ. ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ 1,66,867 ಕೊಳಚೆ ಪ್ರದೇಶದಲ್ಲಿನ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಆ ಕುಟುಂಬಗಳ ನೆಮ್ಮದಿಯುತ ಜೀವನಕ್ಕೆ ದಾರಿ ಮಾಡಿಕೊಟ್ಟಿದೆ. ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯನ್ನು ಬಿ. ಆರ್. ಅಂಬೇಡ್ಕರ್ ನಿವಾಸ್ ಯೋಜನೆಯೊಂದಿಗೆ ಸಮನ್ವಯಗೊಳಿಸಿ ಅನುಷ್ಠಾನಗೊಳಿಸಲಾಗುತ್ತಿದೆ. 118359 ಮನೆಗಳ ಫಲಾನುಭವಿಗಳು ಕೇಂದ್ರ ಮತ್ತು ರಾಜ್ಯದ ಸಹಾಯಧನವನ್ನು ಹೊರತುಪಡಿಸಿ 4 ರಿಂದ 5 ಲಕ್ಷಗಳಷ್ಟು ವಂತಿಕೆಯನ್ನು ಪಾವತಿಸಬೇಕಾಗಿತ್ತು. ಆದರೆ ಫಲಾನುಭವಿಗಳು ಕಟ್ಟಲಾಗದ ಸ್ಥಿತಿಯಲ್ಲಿರುವುದನ್ನು ಮನಗಂಡು, ಫಲಾನುಭವಿಗಳು 1 ಲಕ್ಷ ರೂ. ಮಾತ್ರ ವಂತಿಕೆಯ ರೂಪದಲ್ಲಿ ನೀಡಿ ಉಳಿಕೆ ಪೂರ್ತಿ ಅನುದಾನವನ್ನು ನನ್ನ ಸರ್ಕಾರವೇ ಪಾವತಿಸುತ್ತಿದೆ. ಈಗಾಗಲೇ 36,789 ಮನೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. 39,843 ಮನೆಗಳು ಸದ್ಯದಲ್ಲಿ ಲೋಕಾರ್ಪಣೆಗೆ ಸಿದ್ಧವಾಗಿವೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನೇ ವಿಶೇಷ ಪೊಲೀಸ್ ಠಾಣೆಗಳೆಂದು ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಂಡಿದೆ.ಇದಕ್ಕಾಗಿ 450 ಹೊಸ ಹುದ್ದೆಗಳನ್ನು ಸೃಜಿಸಲು ಅನುಮತಿ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗಾಗಿ, 2024-25ರಲ್ಲಿ, SCSP ಅಡಿಯಲ್ಲಿ ರೂ.27,674 ಕೋಟಿಗಳು ಮತ್ತು TSP ಅಡಿಯಲ್ಲಿ ರೂ. 11,447 ಕೋಟಿಗಳು,20 ಒಟ್ಟು ರೂ.39,121 ಕೋಟಿಗಳನ್ನು ಹಂಚಿಕೆ ಮಾಡಿ ಖರ್ಚುಮಾಡುತ್ತಿದೆ. 2024-25ರ ಬಜೆಟ್ನಲ್ಲಿ ಘೋಷಿಸಿದಂತೆ, 22 ಹೊಸ ವಸತಿ ಶಾಲೆಗಳು ಮತ್ತು 31 ಹಾಸ್ಟೆಲ್ಗಳನ್ನು ಪ್ರಾರಂಭಿಸಲಾಗಿದೆ.ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಸೌಲಭ್ಯಗಳನ್ನು ಒದಗಿಸಲು 47 ಹಾಸ್ಟೆಲ್/ವಸತಿ ಶಾಲೆಗಳ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯು 2024 ರಲ್ಲಿ “ಪ್ರಜಾಪ್ರಭುತ್ವ ದಿನವನ್ನು ಯಶಸ್ವಿಯಾಗಿ ನಡೆಸಿದ್ದು, ಬೀದರ್ನಿಂದ ಚಾಮರಾಜನಗರದವರೆಗೆ ಒಟ್ಟು 2500 ಕಿ.ಮೀ. ದೂರವನ್ನು 22 ಲಕ್ಷ ಜನರನ್ನು ಒಳಗೊಂಡ ಮಾನವ ಸರಪಳಿಯನ್ನು ರಚಿಸಿ, ವಿಶ್ವ ದಾಖಲೆಯನ್ನು ಪಡೆದಿದೆ. ಸಂವಿಧಾನ ವಿರೋಧಿ ಶಕ್ತಿಗಳು ಕ್ರಿಯಾಶೀಲವಾಗುತ್ತಿರುವುದನ್ನು ಮನಗಂಡಿರುವ ನನ್ನ ಸರ್ಕಾರವು ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂಬ ಉದ್ದೇಶದಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಶಾಘನೀಯ ಕೆಲಸ ಮಾಡುತ್ತಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಕೊಡಿಸುವ ಉದ್ದೇಶದಿಂದ 216 ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 45 ಕೋಟಿ ರೂಪಾಯಿಗಳನ್ನು ಭರಿಸಲಾಗುತ್ತಿದೆ. 12,858 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. 2024-25ನೇ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ 100 ಸಂಖ್ಯಾಬಲದ 14 ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಒಟ್ಟು 403 ವಸತಿ ಶಾಲೆ/ನಿಲಯಗಳನ್ನು ನಿರ್ವಹಣೆ ಮಾಡಲಾಗುತ್ತಿದ್ದು, ಒಟ್ಟಾರೆ 45,560 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ.ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳ ವಿದ್ಯಾರ್ಥಿಗಳ drop-out ಪ್ರಮಾಣವನ್ನು ತಡೆಗಟ್ಟಲು 7 ರಿಂದ 8ನೇ ತರಗತಿಗೆ ಮೇಲ್ದರ್ಜೆಗೇರಿಸಲಾಗಿದೆ ಹಾಗೂ ವಸತಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 25 ರಿಂದ 40ಕ್ಕೆ ಹೆಚ್ಚಿಸಲಾಗಿದೆ. ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ರೂ.221 ಕೋಟಿಗಳನ್ನು ಮೀಸಲಿಟ್ಟಿದ್ದು, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಒಟ್ಟಾರೆ 3,67,281 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಅವಕಾಶ ಮಾಡಿಕೊಡಲು ಪ್ರಬುದ್ಧ ಯೋಜನೆಯಡಿ ರೂ.10ಕೋಟಿ ಮೀಸಲಿಟ್ಟಿದ್ದು, ಈಯೋಜನೆಯಡಿ ಪರಿಶಿಷ್ಟ ಪಂಗಡದ 31 ವಿದ್ಯಾರ್ಥಿಗಳು ವಿದೇಶಿವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದಲ್ಲಿಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಆಯವ್ಯಯ ಘೋಷಣೆಯಂತೆ150 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಿದೆ. ಹಿಂದುಳಿದ ವರ್ಗಗಳ ಜನಾಂಗಗಳ ಸಂಘಸಂಸ್ಥೆಗಳ ಸಮುದಾಯ ಭವನಗಳನ್ನು ನಿರ್ಮಿಸಲುರೂ.150 ಕೋಟಿಗಳ ಸಹಾಯಧನ ಮಂಜೂರು ಮಾಡಿದೆ.22 ಹಿಂದುಳಿದ ವರ್ಗಗಳ ಯುವಜನರಿಗೆ ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ., ಬ್ಯಾಂಕಿಂಗ್, ಭಾರತೀಯ ಸೇನೆ ಮುಂತಾದ ಪರೀಕ್ಷೆಗಳಿಗೆ ತರಬೇತಿ ನೀಡಲು ಕೊಪ್ಪಳ ಜಿಲ್ಲೆಯ ಕನಕಗಿರಿ ಮತ್ತು ಕಲಬುರಗಿಯಲ್ಲಿ ತರಬೇತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 250 ಸಂಖ್ಯಾ ಬಲದ 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಮತ್ತು 100 ಸಂಖ್ಯಾ ಬಲದ 96 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಹಾಗೂ 300 ಸಂಖ್ಯಾಬಲವುಳ್ಳ 50 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗಿದೆ.

2024-25ನೇ ಸಾಲಿನ ಆಯವ್ಯಯದ ಘೋಷಣೆಯಂತೆ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ರೂ.200 ಕೋಟಿಗಳ ಅನುದಾನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 76 ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳಿಗೆ ರೂ.700 ಕೋಟಿಗಳ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇಲಾಖಾ ವತಿಯಿಂದ ನಡೆಸುತ್ತಿರುವ 161 ವಸತಿ ಶಾಲೆ/ಕಾಲೇಜುಗಳಲ್ಲಿ ವಸತಿ ಸೌಲಭ್ಯದೊಂದಿಗೆ ಆಂಗ್ಲ ಮಾಧ್ಯಮದಲ್ಲಿ ಒಟ್ಟು 44,957 ವಿದ್ಯಾರ್ಥಿಗಳು ವ್ಯಾಸಂಗವನ್ನು ಪಡೆಯುತ್ತಿದ್ದಾರೆ. 250 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 38,876 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದ್ದು, ಸದರಿ ಶಾಲೆಗಳ ನಿರ್ವಹಣೆಗಾಗಿ ರೂ.106 ಕೋಟಿಗಳನ್ನು ಒದಗಿಸಲಾಗಿದೆ.

More articles

Latest article