ಶಿಕ್ಷಣ ಇಲಾಖೆಯಲ್ಲಿ 13000 ಕ್ಕೂ ಹೆಚ್ಚಿನ ಪದವೀಧರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ 1088 ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡಸಲಾಗಿದೆ. 311 ಸಂಖ್ಯೆಯ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ವಿವೇಕ ಯೋಜನೆ ಹಾಗೂ ವಿಶೇಷ ಅನುದಾನದಡಿ 5349 ಶಾಲಾ ಕೊಠಡಿಗಳ ಕಾಮಗಾರಿ ಪೂರ್ಣಗೊಂಡಿವೆ. ಪ್ರಸ್ತುತ 784 ಕೊಠಡಿ ಕಾಮಗಾರಿಗಳು ಪ್ರಗತಿಯಲ್ಲಿವೆ. 522 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುತ್ತಿದೆ. ರಾಜ್ಯದ 1953 ಸರ್ಕಾರಿ ಶಾಲೆಗಳಲ್ಲಿ ಪೂರ್ವಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಿ ನರ್ಸರಿ ಶಾಲೆಗಳನ್ನು ತೆರೆಯಲಾಗಿದೆ. ಇದಷ್ಟೇ ಅಲ್ಲದೆ, ಮಕ್ಕಳಿಗೆ ರಜಾ ದಿನಗಳನ್ನು ಹೊರತುಪಡಿಸಿ ವಾರದ ಎಲ್ಲಾ ದಿನಗಳಂದು ಸರ್ಕಾರ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ನುಗಳು ಸೇರಿ ಮೊಟ್ಟೆಯನ್ನು ನೀಡುತ್ತಿವೆ. ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ 2002 ರಲ್ಲಿ ಡಾ. ಡಿ.ಎಂ.ನಂಜುಂಡಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಸಮಿತಿಯ ವರದಿಯನ್ನು ಆಧರಿಸಿ ಇದುವರೆಗೆ 37,662 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ ಈ ದಿಶೆಯಲ್ಲಿ ಖರ್ಚು ಮಾಡಿದ ಸಂಪನ್ಮೂಲಗಳ ಪರಿಣಾಮ ಹಾಗೂ ಮುಂದುವರಿದ ಪ್ರಾದೇಶಿಕ ಅಸಮತೋಲನದ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಆರ್ಥಿಕ ತಜ್ಞರಾದ ಡಾ.ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈ ವರ್ಷವೇ ತನ್ನ ವರದಿಯನ್ನು ಸಲ್ಲಿಸಲಿದೆ. ವರದಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ಧಿಯಲ್ಲಿ ಸಮತೋಲನವನ್ನು ಸಾಧಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ನನ್ನ ಸರ್ಕಾರವು ಇತ್ತೀಚೆಗೆ ತಾನೆ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ಯಶಸ್ವಿಯಾಗಿ ಆಯೋಜಿಸಿದೆ. ವಿಶ್ವದ 19 ಪ್ರಮುಖ ದೇಶಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದವು. ಈ ಸಮ್ಮೇಳನವು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹೂಡಿಕೆಯಲ್ಲಿ ಹೊಸ ದಾಖಲೆಯನ್ನೆ ಬರೆದಿದೆ. 10.27 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವನ್ನು ಹೂಡಿಕೆ ಮಾಡಲು ಒಡಂಬಡಿಕೆಗಳಾಗಿವೆ. ಈ ಬಾರಿ ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ವ್ಯಾಪ್ತಿಯಿಂದ ಹೊರಗೆ ಶೇ.75ಕ್ಕೂ ಹೆಚ್ಚಿನ ಪ್ರಮಾಣದ ಹೂಡಿಕೆ ಒಪ್ಪಂದಗಳಾಗಿವೆ. ಉತ್ತರ ಕರ್ನಾಟಕದಲ್ಲಿ ಶೇ.45ರಷ್ಟು ಹೂಡಿಕೆ ಮಾಡಲು ಉದ್ದಿಮೆದಾರರು ಮುಂದೆ ಬಂದಿದ್ದಾರೆ. ಇದರಿಂದ ರಾಜ್ಯದ ನಿರುದ್ಯೋಗ ಸಮಸ್ಯೆಯನ್ನು ನಿಯಂತ್ರಿಸಲು ನೆರವಾಗುತ್ತದೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವುದರಲ್ಲೂ ಕರ್ನಾಟಕವು ಇಡೀ ದೇಶದಲ್ಲಿ ಮುಂಚೂಣಿ ರಾಜ್ಯವಾಗಿದೆ. ರಾಜ್ಯವು ತನ್ನ 2024-25 ರ ಬಜೆಟ್ನ ಶೇ.15.01ರಷ್ಟು ಸಂಪತ್ತನ್ನು ಬಂಡವಾಳ ವೆಚ್ಚಗಳಿಗಾಗಿ ವಿನಿಯೋಗಿಸುತ್ತಿದೆ. ಇದು ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣ ಮುಂತಾದ ಪ್ರಗತಿಪರ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದ್ದಾಗಿದೆ. ನನ್ನ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ತರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಈ ಕಾರಣದಿಂದಲೇ ಕಂದಾಯ, ಗ್ರಾಮೀಣಾಭಿವೃದ್ಧಿ, ಅಬಕಾರಿ, ಅರಣ್ಯ ಮುಂತಾದ ಇಲಾಖೆಗಳಲ್ಲಿ ಅಧಿಕಾರಿ ನೌಕರರ ವರ್ಗಾವಣೆಗಳಿಗಾಗಿ ಕೌನ್ಸೆಲಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ಜನರಿಗೆ ನೀಡುವ ಸವಲತ್ತುಗಳನ್ನು ಮಧ್ಯವರ್ತಿ ರಹಿತವಾಗಿ ನೀಡಲು ಕ್ರಮವಹಿಸಲಾಗಿದೆ. ಹಿಂದೆ ನಡೆದಿದ್ದ ಭ್ರಷ್ಟಾಚಾರದ ಪ್ರಕರಣಗಳ ತನಿಖೆಗಳು ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬಂದಿವೆ.
ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸಲು ಸಮಗ್ರ ಹಾಗೂ ಸಮರ್ಥ ಪ್ರಯತ್ನವನ್ನು ಮಾಡಲಾಗುತ್ತಿದೆ. ಇದರ ಜೊತೆಯಲ್ಲಿ ಜನರಿಗೆಆರೋಗ್ಯ, ಶಿಕ್ಷಣ, ನೈರ್ಮಲ್ಯ ಹಾಗೂ ಸುಸ್ಥಿರ ಕೃಷಿವ್ಯವಸ್ಥೆಯುಳ್ಳ ರಾಜ್ಯವನ್ನಾಗಿ ರೂಪಿಸಲು ಸರ್ವಪ್ರಯತ್ನಗಳನ್ನು ಮಾಡುತ್ತಿದೆ. ನನ್ನ ಸರ್ಕಾರವು 2024-25ನೇ ಸಾಲಿನಲ್ಲಿ ರಾಜ್ಯದ ಆರ್ಥಿಕಬೆಳವಣಿಗೆಯನ್ನು ಉತ್ತೇಜಿಸುವುದರೊಂದಿಗೆ ವಿತ್ತೀಯನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿದೆ. 2024-25ರಆರ್ಥಿಕ ವರ್ಷದ ಮೊದಲ ಮೂರು ತ್ರೈಮಾಸಿಕದಲ್ಲಿ ರಾಜ್ಯದರಾಜಸ್ವ ಸಂಗ್ರಹಣೆಯು 1,81,908 ಕೋಟಿ ರೂ.ಗಳಿಗೆತಲುಪಿರುತ್ತದೆ. ಕಳೆದ ಸಾಲಿಗೆ ಹೋಲಿಸಿದರೆ, ಡಿಸೆಂಬರ್ ತಿಂಗಳಅಂತ್ಯದವರೆಗೆ ರಾಜ್ಯದ ರಾಜಸ್ವ ಸ್ವೀಕೃತಿಯು ಶೇಕಡ 13 ರಷ್ಟುಬೆಳವಣಿಗೆ ಸಾಧಿಸಿದೆ. ರಾಜ್ಯಗಳಿಂದ ಸ್ವೀಕೃತವಾಗುವ ಒಟ್ಟುಜಿ.ಎಸ್.ಟಿ ತೆರಿಗೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ 2ನೇಸ್ಥಾನದಲ್ಲಿದ್ದು, ಪ್ರಸಕ್ತ ವರ್ಷದ ಡಿಸೆಂಬರ್ ಅಂತ್ಯದವರೆಗೆರಾಜ್ಯದ ಜಿ.ಎಸ್.ಟಿ ತೆರಿಗೆಯು ಶೇ.12ರಷ್ಟು ವರ್ಷವಾರುಬೆಳವಣಿಗೆ ಸಾಧಿಸಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಮಾಜದ ಆರ್ಥಿಕ ದುರ್ಬಲವರ್ಗದ ಜನತೆಯಿಂದ ಸಾಲ ವಸೂಲಾತಿಯಲ್ಲಿ ಕಿರುಕುಳ, ಹಿಂಸೆಮತ್ತು ಒತ್ತಡದ ಹಲವಾರು ಘಟನೆಗಳು ಬೆಳಕಿಗೆ ಬಂದಿವೆ.ಕರ್ನಾಟಕ ರಾಜ್ಯದಲ್ಲಿ ಕಿರು ಸಾಲ ಮತ್ತು ಸಣ್ಣ ಸಾಲವಸೂಲಾತಿಯಲ್ಲಿ ಕಿರುಕುಳ, ಹಿಂಸೆ ಮತ್ತು ಒತ್ತಡ ತಡೆಯುವನಿಟ್ಟಿನಲ್ಲಿ ಪರಿಣಾಮಕಾರಿಯಾದ ಗಂಭೀರ ಕ್ರಮಗಳನ್ನು ಕೈಗೊಳ್ಳಲು, ಕಿರುಕುಳ ನೀಡುವ ವ್ಯಕ್ತಿಗಳಿಗೆ ಕನಿಷ್ಠ 6 ತಿಂಗಳುಮತ್ತು ಗರಿಷ್ಠ 10 ವರ್ಷಗಳ ವರೆಗೆ ವಿಸ್ತರಿಸಬಹುದಾದ ಶಿಕ್ಷೆಹಾಗೂ 5 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಸುಗ್ರೀವಾಜ್ಞೆಯನ್ನು ನನ್ನ ಸರ್ಕಾರ ಅನುಷ್ಠಾನಗೊಳಿಸಿದೆ. ಕಿರು ಸಾಲ ವಸೂಲಾತಿಯ ಕಿರುಕುಳವನ್ನು ತಡೆಯುವ ನಿಟ್ಟಿನಲ್ಲಿ ಶಾಸನಾತ್ಮಕವಾದ ಕ್ರಮಗಳಿಗೆ ಸರ್ಕಾರ ಮುಂದಾಗಿದೆ. ಕೃಷಿಯು ಹವಾಮಾನ ವೈಪರೀತ್ಯ ಮುಂತಾದ ಬದಲಾದ ಸಂದರ್ಭಗಳಲ್ಲಿ ಹಲವು ಮಾರ್ಪಾಟುಗಳನ್ನು ಹೊಂದುತ್ತಿದೆ. ಬಿತ್ತನೆಯಿಂದ ಹಿಡಿದು ಕಟಾವಿನವರೆಗೆ ಯಾಂತ್ರೀಕೃತ ಗೊಳಿಸಬೇಕಾದ ಅವಶ್ಯಕತೆ ಸೃಷ್ಟಿಯಾಗಿದೆ. ಈ ಸಾಲಿನಲ್ಲಿ 194 ಹೈಟೆಕ್ ಹಾರ್ವೆಸ್ಟ್ ಹಬ್ಗಳು ಸ್ಥಾಪನೆಯಾಗುತ್ತಿವೆ. ಹಾರ್ವೆಸ್ಟರ್ಗಳನ್ನು ಪಡೆಯುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರೈತರಿಗೆ ಶೇ.50 ರಷ್ಟು ಮತ್ತು ಇತರೆಯವರಿಗೆ ಶೇ.40 ರಷ್ಟು ಸಹಾಯ ಧನ ನೀಡಲಾಗುತ್ತಿದೆ.
ರ್ನಾಟಕ ರಾಜ್ಯವು 27.41 ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶವನ್ನು ಹೊಂದಿದ್ದು, ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಪ್ರಸಕ್ತ ವರ್ಷದಲ್ಲಿ ಹೊಸದಾಗಿ 19,166 ಹೆಕ್ಟೇರ್ ಪ್ರದೇಶವನ್ನು ತೋಟಗಾರಿಕೆ ಬೆಳೆಗಳ ಅಡಿಯಲ್ಲಿ ತರಲಾಗಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಬೀಜದಿಂದ ಮಾರುಕಟ್ಟೆಯವರೆಗಿನ ಸೇವೆಗಳನ್ನು ಒಂದೇ ಸೂರಿನಡಿ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಒದಗಿಸಲು “ತೋಟಗಾರಿಕೆ ಕಿಸಾನ್ ಮಾಲ್’ಗಳನ್ನು ಸ್ಥಾಪಿಸಲಾಗುತ್ತಿದೆ. ಈವರೆಗೆ ರೈತರಿಗೆ 15.63 ಲಕ್ಷ ಉತ್ತಮ ಗುಣಮಟ್ಟದ ಸಸಿಗಳನ್ನು ವಿತರಿಸಲಾಗಿದೆ. ಅಗತ್ಯವಾದ ಯಂತ್ರೋಪಕರಣಗಳನ್ನು ಸಬ್ಸಿಡಿ ದರದಲ್ಲಿ ಜನರಿಗೆ ನೀಡಲಾಗಿದೆ. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ವಿವಿಧ ತೋಟಗಾರಿಕಾ ಬೆಳೆಗಳ ತಳಿಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಾಗಿರುತ್ತದೆ. ರಾಜ್ಯದ ರೈತ ಮತ್ತು ರೈತ ಉತ್ಪಾದಕರಸಂಸ್ಥೆಯಿಂದ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ“ಝೇಂಕಾರ” ಎಂಬ ಹೆಸರಿನ ವಿಶೇಷ ಬ್ರಾಂಡ್ ರೂಪಿಸಿ |ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನನ್ನ ಸರ್ಕಾರವು ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆನೀಡಲಾಗುತ್ತಿದ್ದ ಕರರಹಿತ ಡೀಸೆಲ್ ವಾರ್ಷಿಕ ಮಿತಿಯನ್ನು 1.50 ಲಕ್ಷ ಕಿಲೋ ಲೀಟರ್ನಿಂದ 2.0 ಲಕ್ಷ ಕಿಲೋ ಲೀಟರ್ಗೆ ಹೆಚ್ಚಿಸಿದೆ. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಸಮುದ್ರದ ಆಂಬ್ಯುಲೆನ್ಸ್ ಖರೀದಿಸಲು ಕ್ರಮವಹಿಸಲಾಗುತ್ತಿದೆ.
ರೇಷ್ಮೆಗೆ ಸಂಬಂಧಿಸಿದಂತೆ ಹಲವು ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯವು ರೇಷ್ಮೆ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿದೆ. ರೇಷ್ಮೆ ಕೃಷಿ ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆ ಚಟುವಟಿಕೆಗಳಲ್ಲಿ ಪ್ರತಿ ವರ್ಷ ಅಂದಾಜು 15.43ಲಕ್ಷ ಜನರಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ. 2024-25ನೇ ಸಾಲಿನಲ್ಲಿ ವಿವಿಧ ಫಲಾನುಭವಿಯಾಧಾರಿತ ಕಾರ್ಯಕ್ರಮಗಳಡಿ ಸರ್ಕಾರವು ರೂ.60 ಕೋಟಿಗಳ ಸಹಾಯಧನ ಸೌಲಭ್ಯವನ್ನು ಭಾಗೀದಾರರಿಗೆ ಒದಗಿಸಿದೆ. ಜನವರಿ 2025 ರ ಅಂತ್ಯಕ್ಕೆ 20.22 ಲಕ್ಷ ರೈತರಿಗೆ ರೂ.16,942 ಕೋಟಿಗಳ ಬೆಳೆ ಸಾಲ ಮತ್ತು 46,000 ರೈತರಿಗೆ ರೂ. 1442 ಕೋಟಿಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಿಸಲಾಗಿದೆ. ಈ ವರ್ಷದಲ್ಲಿ ಸಹಕಾರ ಸಂಘಗಳಿಗೆ ಬಡ್ಡಿ ಸಹಾಯಧನ ನೀಡಲು 1451 ಕೋಟಿ ರೂ. ಗಳನ್ನು ಒದಗಿಸಿ ಖರ್ಚು ಮಾಡಲಾಗಿದೆ. ಆರ್ಥಿಕ ಬಿಕ್ಕಟ್ಟಿನಲ್ಲಿದ್ದ ಮೈಸೂರು ಸಕ್ಕರೆ ಕಂಪನಿಗೆ ಮರುಜೀವ ನೀಡಿ 2024-25ನೇ ಸಾಲಿನ ಕಬ್ಬು ಅರೆಯುವ ಹಂಗಾಮಿನಲ್ಲಿ 1,99,888 ಮೆ. ಟನ್ಗಳಷ್ಟು ಕಬ್ಬನ್ನು ನುರಿಸಿ ರೈತರಿಗೆ ರೂ.70.46 ಕೋಟಿಗಳ ಕಬ್ಬು ಬಿಲ್ಲನ್ನು ಪಾವತಿಸಲಾಗಿದೆ.
ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರವನ್ನು ದೇಶದಲ್ಲಿಯೇ ಅಭೂತಪೂರ್ವ ಮಾದರಿಯಲ್ಲಿ ಮುನ್ನಡೆಸುವ ಉದ್ದೇಶದಿಂದ ಹೊಸ ಕರ್ನಾಟಕ ಕೈಗಾರಿಕಾ ನೀತಿ, 2025-30 ಅನ್ನು ಜಾರಿಗೆ ತರಲಾಗಿದೆ. ಬಂಡವಾಳ ಹೂಡಿಕೆಯಲ್ಲಿ ರಾಜ್ಯವು 2ನೇ ಸ್ಥಾನದಲ್ಲಿದೆ. 2024-25ನೇ ಸಾಲಿನಲ್ಲಿ ಏಪ್ರಿಲ್ 2024 ರಿಂದ ಸೆಪ್ಟೆಂಬರ್ 2024ರ ಅಂತ್ಯದವರೆಗೆ ರಾಜ್ಯವು 88,853 ಮಿಲಿಯನ್ ಡಾಲರುಗಳಷ್ಟು ಮೌಲ್ಯದ ಸರಕು ಸೇವೆಗಳನ್ನು ರಫ್ತು ಮಾಡುವುದರೊಂದಿಗೆ ಒಟ್ಟಾರೆ ರಫಿನಲ್ಲಿ 1ನೇ ಸ್ಥಾನದಲ್ಲಿದೆ. 2023-24ಕ್ಕೆ ಹೋಲಿಸಿದರೆ ರಫ್ರಿನಲ್ಲಿ ರಾಜ್ಯವು ಶೇ. 11.17 ರಷ್ಟು ಏರಿಕೆಯ ಪ್ರಗತಿಯನ್ನು ಸಾಧಿಸಿದೆ. ನನ್ನ ಸರ್ಕಾರವು ಹೊಸದಾಗಿ ಬೆಂಗಳೂರು ಹೊರವಲಯದಲ್ಲಿ ರೂ.40,000 ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಕ್ಲಿನ್ ಸಿಟಿ (Knowledge, Wellness and Innovation (KWIN) City) ಅನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಇದರಿಂದಾಗಿ ಸುಮಾರು 80,000 ಉದ್ಯೋಗಾವಕಾಶಗಳು ಸೃಷ್ಟಿಯಾಗಬಹುದೆಂದು ಅಂದಾಜಿಸಲಾಗಿದೆ. ಎಂ.ಎಸ್.ಎಂ.ಇ ವಲಯವು ವ್ಯಾಪಕ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ವಲಯವಾಗಿದೆ. ಈ ವಲಯವು ಕರ್ನಾಟಕದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ನನ್ನ ಸರ್ಕಾರವು ಈ ವಲಯದ ಅಭಿವೃದ್ಧಿಗಾಗಿ 687 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ.