ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/-ಗಳನ್ನು ನೀಡಲಾಗುತ್ತಿದೆ. ಸದರಿ ಯೋಜನೆಯಡಿ 1,26,24,547 ಮಹಿಳಾ ಫಲಾನುಭವಿಗಳು ನೋಂದಣಿಯಾಗಿದ್ದು ಯೋಜನೆ ಪ್ರಾರಂಭವಾದಾಗಿನಿಂದ ಈ ವರೆಗೆ 36,000 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಈಗ ಲಿಂಗತ ಅಲ್ಪಸಂಖ್ಯಾತರಿಗೂ ವಿಸ್ತರಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಪ್ರೋತ್ಸಾಹಿಸುವ ಮತ್ತು ಲಿಂಗಾನುಪಾತವನ್ನು ಉತ್ತಮಗೊಳಿಸುವ ಉದ್ದೇಶದಿಂದ ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಪ್ರತಿ ಹೆಣ್ಣು ಮಗುವಿನ ಖಾತೆಗೆ ಪ್ರತಿ ವರ್ಷ ರೂ.3,000ದಂತೆ 15 ವರ್ಷಗಳವರೆಗೆ ಜಮೆ ಮಾಡಲಾಗುತ್ತಿದೆ. 2024-25ನೇ ಸಾಲಿನಲ್ಲಿ, ಇಲ್ಲಿಯವರೆಗೆ 5,59,693 ಫಲಾನುಭವಿಗಳ ಖಾತೆಗೆ 168 ಕೋಟಿ ರೂ.ಗಳನ್ನು ಜಮಾ ಮಾಡಲಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 10,01,379 ಫಲಾನುಭವಿಗಳನ್ನು ನೋಂದಾಯಿಸಿ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳಡಿ 11.94 ಲಕ್ಷ ಫಲಾನುಭವಿಗಳಿಗೆ ರೂ.702 ಕೋಟಿ ಮೊತ್ತದಷ್ಟು ಸಹಾಯಧನ ಪಾವತಿಸಲಾಗಿದೆ. ರೂ.1,515 ಕೋಟಿ 24 ಮೊತ್ತದ ಸುಂಕ ಸಂಗ್ರಹಿಸಲಾಗಿದೆ. 10.63 ಲಕ್ಷ ಫಲಾನುಭವಿಗಳಿಗೆ ಪ್ರವೆಂಟಿವ್ ಹೆಲ್ತ್ ಕೇರ್ ಯೋಜನೆಯಡಿ ವೈದ್ಯಕೀಯ ತಪಾಸಣೆ ನಡೆಸಿರುತ್ತದೆ. ಫಲಾನುಭವಿಗಳ ನೋಂದಣಿ ಮತ್ತು ಸೌಲಭ್ಯಗಳನ್ನು ವಿತರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 43 ಕಾರ್ಮಿಕ ಸೇವಾ ಕೇಂದ್ರಗಳನ್ನು ಸ್ಥಾಪಿಸಲు ಕ್ರಮ ಕೈಗೊಂಡಿದೆ.
ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ, 221 ಅಪಘಾತ ಪ್ರಕರಣಗಳಲ್ಲಿ ರೂ.10.61 ಕೋಟಿಗಳ “ಅಪಘಾತ ಪರಿಹಾರವನ್ನು ಪಾವತಿಸಲಾಗಿದೆ. ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯಡಿ 25 ವರ್ಗದ 21,89,945 ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸವಲತ್ತು ನೀಡಲಾರಂಭಿಸಿದೆ. 74. ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು “ಕ್ಷೇಮಾಭಿವೃದ್ಧಿ ಮಂಡಳಿ”ಯನ್ನು ರಚಿಸಲಾಗಿದ್ದು, 5,12,135 ಕಾರ್ಮಿಕರನ್ನು ನೋಂದಾಯಿಸಲಾಗಿದೆ. 75. ರಾಜ್ಯ ಸರ್ಕಾರವು ಗ್ರಾಮೀಣ ಮನೆಗಳಿಗೆ ನಳ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಮುಂದುವರೆಸಿದೆ. 101.32 ಲಕ್ಷ ಮನೆಗಳ ಪೈಕಿ ಈವರೆಗೆ 83.94 ಲಕ್ಷ ಮನೆಗಳಿಗೆ ನಳ ಸಂಪರ್ಕವನ್ನು ಒದಗಿಸಲಾಗಿದೆ. 2024-25ನೇ ಸಾಲಿನಲ್ಲಿ 7.27 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಜನವರಿ-2025ರ ಅಂತ್ಯದವರೆಗೆ 10.91 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ, ಒಟ್ಟು ರೂ.5626.56 ಕೋಟಿ ಮೊತ್ತ ವೆಚ್ಚ ಮಾಡಲಾಗಿದೆ. ಬಾಹ್ಯ ನೆರವಿನ ಯೋಜನೆಯಡಿ 7,110 ಕಿ.ಮೀ ಉದ್ದದ ಗ್ರಾಮೀಣ ರಸ್ತೆಗಳನ್ನು ರೂ.5,190 ಕೋಟಿಗಳಲ್ಲಿ ಅಭಿವೃದ್ಧಿ ಪಡಿಸಲು ಪ್ರಗತಿಪಥ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ. ಜೊತೆಗೆ 1,150 ಕಿ.ಮೀ. ಉದ್ದದ ರಸ್ತೆಗಳನ್ನು “ಕಲ್ಯಾಣ ಪಥ” ಕಾರ್ಯಕ್ರಮದಡಿ ಅಭಿವೃದ್ಧಿ ಪಡಿಸಲು ಉದ್ದೇಶಿಸಿ ಟೆಂಡರ್ ಗಳನ್ನು ಕರೆಯಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 3867 ಕೂಸಿನ ಮನೆಗಳನ್ನು ಪ್ರಾರಂಭಿಸಲಾಗಿದ್ದು, 49,288 ಮಕ್ಕಳ ಪಾಲನೆ ಮಾಡಲಾಗುತ್ತಿದೆ. ಒಟ್ಟು 5,895 ಅರಿವು ಕೇಂದ್ರಗಳ ಪೈಕಿ 5,770 ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಿದ್ದು, 50.28 ಲಕ್ಷ ಮಕ್ಕಳನ್ನು ನೋಂದಣಿಮಾಡಲಾಗಿದೆ. ಇದಲ್ಲದೇ ಗ್ರಂಥಾಲಯ ಹೊಂದಿಲ್ಲದಗ್ರಾಮಗಳಲ್ಲಿ 6,599 ಹೊಸ ಗ್ರಂಥಾಲಯಗಳನ್ನು ಪ್ರಾರಂಭಿಸಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ತಗ್ಗಿಸುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಡಬಲ್ ಡೆಕ್ಕ ಮಾದರಿಯಲ್ಲಿ ಮೆಟ್ರೋ ಮತ್ತು ರಸ್ತೆಮೇತುವೆ ನಿರ್ಮಿಸಲು ಉದ್ದೇಶಿಸಿದೆ. ಸುಮಾರು 40.50 ಕಿ.ಮೀ.ಸಂಯುಕ್ತ ಮೆಟ್ರೋ ರಸ್ತೆ ಮೇಲ್ವೇತುವೆ ಯೋಜನೆಯನ್ನು ರೂ.8,916 ಕೋಟಿಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ.
ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ಭಾಗ-1 ರ ಯೋಜನೆಯನ್ನು ಕೈಗೊಳ್ಳಲು ಅಗತ್ಯವಿರುವ ರೂ.27,000 ಕೋಟಿಗಳನ್ನು ಹುಡೋ ಸಂಸ್ಥೆಯಿಂದ ಸಾಲದ ರೂಪದಲ್ಲಿ ಪಡೆಯಲು ನಿರ್ಧರಿಸಿದ್ದು, ಸಾಲದ ಮೊತ್ತಕ್ಕೆ ಭದ್ರತೆ ನೀಡಲಿದೆ. ಕಾಮಗಾರಿಯನ್ನು ಸುಮಾರು 2565 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ. ಸುಮಾರು 73 ಕಿ.ಮೀ ಉದ್ದದ ರಸ್ತೆ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-2 ರಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಕೃಷ್ಣರಾಜಪುರದವರೆಗೆ 19.75ಕಿ.ಮೀ. ಮತ್ತು ಹಂತ-28 ರಲ್ಲಿ ಕೃಷ್ಣರಾಜಪುರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 38.44 ಕಿ.ಮೀ. ಉದ್ದದ ಒಟ್ಟು ರೂ. 14,788 ಕೋಟಿ ಅಂದಾಜು ವೆಚ್ಚದ ಕಾಮಗಾರಿಯು ಪ್ರಗತಿಯಲ್ಲಿದೆ. ಹಂತ-3 ಕಾರಿಡಾರ್ 1 – ಕೆಂಪಾಪುರದಿಂದ ಜೆ.ಪಿ.ನಗರ 4ನೇ ಹಂತದವರೆಗೆ – 32.15 ಕಿ.ಮೀ ಮತ್ತು ಕಾರಿಡಾರ್ 2 – ಹೊಸಹಳ್ಳಿಯಿಂದ ಕಡಬಗೆರೆವರೆಗಿನ – 12.50 ಕಿ.ಮೀ., ಒಟ್ಟು 44.65 ಕಿ.ಮೀ. ಉದ್ದದ, ರೂ.15,611 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಯೋಜನೆಗಳನ್ನು ಡಿಸೆಂಬರ್-2029 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಮಹಿಳೆ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿರ್ಭಯಾ ನಿಧಿಯಡಿ ಸಾರ್ವಜನಿಕ ಸೇವಾ ವಾಹನಗಳು ಅಂದರೆ ಮಜಲು ವಾಹನ, ಶಾಲಾ ವಾಹನ, ಖಾಸಗಿ ಸೇವಾ ವಾಹನ, ಮಾಕ್ಸಿ ಕ್ಯಾಬ್, ಒಪ್ಪಂದ ವಾಹನ, ಮೋಟಾರ್ ಕ್ಯಾಬ್ ಹಾಗೂ ರಾಷ್ಟ್ರೀಯ ರಹದಾರಿ ಹೊಂದಿದ ಸರಕು ಸಾಗಣೆ ವಾಹನಗಳಿಗೆ Vehicle Location Tracking Device & Emergency Panic Button ಅಳವಡಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಒಟ್ಟು 6,04,863 ಸಾರ್ವಜನಿಕ ಸೇವಾ ವಾಹನಗಳು ಪೈಕಿ ಡಿಸೆಂಬರ್ 2024ರ ಅಂತ್ಯಕ್ಕೆ 40,848 ವಾಹನಗಳಿಗೆ ಈ ವ್ಯವಸ್ಥೆ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದಾಗಿ ಭಾರೀ ಸಂಚಾರ ದಟ್ಟಣೆಯಾಗಿ ಅಪಘಾತಗಳ ಹೆಚ್ಚಳಕ್ಕೆ ಕಾರಣವಾಗಿದೆ. ಸುಗಮ ಸಂಚಾರಕ್ಕಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಬೆಂಗಳೂರು ಸಂಚಾರ ಪೊಲೀಸರು ಮುಂಚೂಣಿಯಲ್ಲಿದ್ದಾರೆ. ಸುಸ್ಥಿರ ಸಂಚಾರ ನಿರ್ವಹಣೆಗಾಗಿASTRAM-ಕೃತಕ ಬುದ್ಧಿಮತ್ತೆ ಆಧಾರಿತ ಡೇಟಾ ಪ್ಲಾಟ್ ಫಾರಂ,ನೈಜ ಸಮಯದಲ್ಲಿ ಡೇಟಾವನ್ನು ಸಂಗ್ರಹಿಸಲು ಮತ್ತು ವಿಶ್ಲೇಷಿಸಲು ಮತ್ತು ಸಂಚಾರವನ್ನು ತೆರವುಗೊಳಿಸುವುದಕ್ಕೆ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು AI ಆಧಾರಿತ ಡೇಟಾ ವೇದಿಕೆಯಾಗಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಗರದಾದ್ಯಂತ 34ಸ್ಥಳಗಳಲ್ಲಿ ವಸತಿ ಸಮುಚ್ಚಯ ನಿರ್ಮಿಸಿ ಸುಮಾರು 30,000ವಸತಿ ಘಟಕಗಳನ್ನು ಹಂಚುವ ಗುರಿಯನ್ನು ಹಮ್ಮಿಕೊಂಡಿದೆ.ಈ ಪೈಕಿ ಇದುವರೆವಿಗೂ 25 ಯೋಜನೆಗಳಲ್ಲಿ ಒಟ್ಟು 14,909ಫ್ಲಾಟ್ಗಳ ನಿರ್ಮಾಣ ಕಾರ್ಯಕ್ಕೆಗೊಂಡಿದ್ದು, 10,615 ಫ್ಲಾಟ್ಗಳನಿರ್ಮಾಣ ಕಾರ್ಯ ಪೂರ್ಣಗೊಂಡಿರುತ್ತದೆ. ಮಹಾತ್ಮ ಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಕಾವೇರಿ5ನೇ ಹಂತ ಪೂರ್ಣಗೊಂಡಿದ್ದು, 775 ದಶಲಕ್ಷ ಲೀಟರ್ಹೆಚ್ಚುವರಿಯಾಗಿ ಬಿ.ಬಿ.ಎಂ.ಪಿ.ಗೆ ಸೇರ್ಪಡೆಯಾಗಿರುವ28 110 ಹಳ್ಳಿಗಳ 50 ಲಕ್ಷ ಜನರಿಗೆ ಕಾವೇರಿ ಕುಡಿಯುವ ನೀರನ್ನು ಸರಬರಾಜು ಮಾಡುವ ಯೋಜನೆಯನ್ನು ಜಾರಿಗೊಳಿಸಿದೆ. ಬೆಂಗಳೂರು ನಗರ ಹಾಗೂ ಅದರ ಉಪನಗರಗಳಿಗೆ ಹೆಚ್ಚುವರಿ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು 6 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಸದರಿ ಯೋಜನೆಯನ್ನು ಕೈಗೊಳ್ಳಲು ರೂ.6939 ಕೋಟಿಗಳ ವೆಚ್ಚದಲ್ಲಿ ಡಿ.ಪಿ.ಆರ್ ಸಿದ್ಧಪಡಿಸಲಾಗಿದೆ.
ನನ್ನ ಸರ್ಕಾರವು ದುಡಿಯುವ ವರ್ಗದ ಜನರಿಗೆ ಗುಣಮಟ್ಟದ ಆಹಾರ ನೀಡಲು ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮುಂದುವರೆಸಿದೆ. ಇಂದಿರಾ ಕ್ಯಾಂಟೀನ್ ಹಂತ-02 ರಡಿ 186 ಕ್ಯಾಂಟೀನ್ ನಿರ್ಮಾಣಗೊಳಿಸಲು ಅನುಮೋದನೆಯನ್ನು ನೀಡಿದ್ದು 156 ಕ್ಯಾಂಟೀನ್ ಪೂರ್ಣಗೊಂಡಿವೆ. ಎಡಿಬಿ ಮತ್ತು ಅಮೃತ್ ಯೋಜನೆಯ ಅನುದಾನದಡಿ ಕರ್ನಾಟಕ ಸಮಗ್ರ ನಗರ ನೀರು ನಿರ್ವಹಣಾ ಹೂಡಿಕೆ ಕಾರ್ಯಕ್ರಮದಡಿ ರೂ.2584 ಕೋಟಿ ವೆಚ್ಚದಲ್ಲಿ ರಾಜ್ಯದ 8 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ವಿಶ್ವಬ್ಯಾಂಕ್ ನೆರವಿನ “ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆ” ಯಡಿಯಲ್ಲಿ ರೂ.3741 ಕೋಟಿ ವೆಚ್ಚದಲ್ಲಿ 5 ವರ್ಷಗಳ ಅವಧಿಗೆ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ನಗರಗಳ ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶಗಳಲ್ಲಿ ನಿರಂತರ ನೀರು ಸರಬರಾಜು ಪೂರೈಸುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಸದರಿ ಯೋಜನೆಯನ್ನು ಜೂನ್ 2025 ರ ವೇಳೆಗೆ ಅನುಷ್ಠಾನಗೊಳಿಸುವ ಗುರಿಯಿದೆ. ನನ್ನ ಸರ್ಕಾರವು ನಗರ ಮತ್ತು ಗ್ರಾಮೀಣ ಭಾಗದ ಜನರ ಕ್ರಮಬದ್ಧವಲ್ಲದ ಆಸ್ತಿಗಳಿಗೆ ಇ-ಖಾತಾ ನೀಡಲು ಅತ್ಯಂತ ಜನಪರವಾದ ಯೋಜನೆಯನ್ನು ರೂಪಿಸಿ ಅನುಷ್ಠಾನ ಮಾಡುತ್ತಿದೆ.
ಪ್ರಾರಂಭದಲ್ಲಿ ಕರ್ನಾಟಕ ಮಹಾನಗರಪಾಲಿಕೆಗಳ ಅಧಿನಿಯಮ ಮತ್ತು ಕರ್ನಾಟಕ ಪೌರಸಭೆಗಳ ಅಧಿನಿಯಮ ಕಾಯ್ದೆಗೆ ತಿದ್ದುಪಡಿ ತಂದು ಬಹುದಿನಗಳಿಂದ ನಗರ ಪಟ್ಟಣ ಪ್ರದೇಶಗಳಲ್ಲಿ ಬಾಕಿ ಉಳಿದಿದ್ದ ಸುಮಾರು 30 ಲಕ್ಷಕ್ಕೂ ಹೆಚ್ಚಿನಅನಧಿಕೃತ ಆಸ್ತಿಗಳಿಗೆ ಇ-ಖಾತಾ ನಮೂನೆ 3ಬಿ ನೀಡಲು ಪ್ರಾರಂಭಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಕ್ಕೂ ಈಸೌಲಭ್ಯವನ್ನು ವಿಸ್ತರಿಸಲಾಗುತ್ತದೆ. ರೈತರ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿಡಲು ಕಂದಾಯ ಇಲಾಖೆಯು ‘ಭೂ ಸುರಕ್ಷಾ ಎಂಬ ಗ್ಯಾರಂಟಿಯನ್ನು ನೀಡುತ್ತಿದೆ. ಕಂದಾಯ ಇಲಾಖೆಯಲ್ಲಿನಧೀರ್ಘಾವಧಿ ಮತ್ತು ಮುಖ್ಯ ದಾಖಲೆಗಳನ್ನು ಸ್ಕ್ಯಾನಿಂಗ್,ಡಿಜಿಟಲೀಕರಣ, ಇಂಡೆಕ್ಸಿಂಗ್ ಮತ್ತು ಕೆಟಲಾಗಿಂಗ್ ಮಾಡಿಜನರಿಗೆ ಸುಲಭವಾಗಿ ಸಿಗುವಂತೆ ಮಾಡಲಾಗುವುದು. ಈಗಾಗಲೇ 9 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಿ ತಂತ್ರಾಂಶದಲ್ಲಿಅಪ್ಲೋಡ್ ಮಾಡಲಾಗಿದೆ. ಕಂದಾಯ ಇಲಾಖೆಯಲ್ಲಿ ಮುಟೇಶನ್ಗೆ ಸಂಬಂಧಿಸಿದಂತೆಜನರು ಅನವಶ್ಯಕವಾಗಿ ಸುತ್ತಾಡುವುದನ್ನು ತಪ್ಪಿಸಲುಮುಟೇಶನ್ ಗ್ಯಾರಂಟಿಯನ್ನು ನೀಡಲಾಗಿದೆ. ಮೊದಲು ಖಾತೆಬದಲಾವಣೆಗೆ ಸರಾಸರಿ 32 ದಿನಗಳಷ್ಟು ಕಾಲಾವಧಿ ಬೇಕಾಗಿತ್ತು.ಆಡಳಿತಕ್ಕೆ ಚುರುಕು ಮುಟ್ಟಿಸಿದ ಕಾರಣದಿಂದ ಶೇ.67 ರಷ್ಟು30 92. ಖಾತೆ ಬದಲಾವಣೆಗಳು ಕೆಲವೇ ಗಂಟೆಗಳಲ್ಲಿ ಆಗುತ್ತಿವೆ.ಇನ್ನುಳಿದ ಶೇ.33 ರಷ್ಟು ಮೈಟೇಶನ್ನುಗಳನ್ನು 9 ರಿಂದ 13 ದಿನಗಳಲ್ಲಿ ಮಾಡಲಾಗುತ್ತಿದೆ. ಕಂದಾಯ ನ್ಯಾಯಾಲಯಗಳಲ್ಲಿ ಸಾವಿರಾರು ಪ್ರಕರಣಗಳು 5-10 ವರ್ಷಗಳಿಂದಲೂ ಬಾಕಿ ಉಳಿದಿದ್ದವು.
ಇಂತಹ ಪ್ರಕರಣಗಳ ವಿಲೇವಾರಿಯನ್ನು ಅಭಿಯಾನ ರೂಪದಲ್ಲಿ ಕೈಗೊಂಡ ಕಾರಣದಿಂದ ತಹಶೀಲ್ದಾರ್ ನ್ಯಾಯಾಲಯದಲ್ಲಿದ್ದ 10,744 ಅವಧಿ ಮೀರಿದ ಪ್ರಕರಣಗಳ ಪೈಕಿ 10,410 ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 62,857 ಪ್ರಕರಣಗಳಲ್ಲಿ 37,217 ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಸರ್ಕಾರವು ಅಧಿಕಾರಕ್ಕೆ ಬರುವ ಮೊದಲು ಭೂಮಾಪನ ಇಲಾಖೆಯಲ್ಲಿ 11ಇ ನಕ್ಷೆ ಪಡೆಯಲು ಸರಾಸರಿ 90 ದಿನಗಳು ಹಾಗೂ ಹದ್ದುಬಸ್ತಿಗೆ 120-180 ದಿನಗಳನ್ನು ತೆಗೆದುಕೊಳ್ಳಲಾಗುತ್ತಿತ್ತು. ಈಗ ಪರಿಣಾಮಕಾರಿ ಆಡಳಿತದಿಂದಾಗಿ 90 ದಿನಗಳ ಬದಲಾಗಿ 30 ದಿನಗಳಿಗೆ 11 ನಕ್ಕೆ ಸಿಗುತ್ತಿದೆ. ಹದ್ದುಬಸ್ತು ಪ್ರಕರಣಗಳನ್ನು 45 ದಿನಗಳಲ್ಲಿ ಮಾಡಲಾಗುತ್ತಿದೆ. ರಾಜ್ಯದಲ್ಲಿ ನನ್ನ ಭೂಮಿ ಯೋಜನೆಯ ಮುಖಾಂತರ ದರಖಾಸ್ತು ಜಮೀನುಗಳ ಪೋಡಿ ದುರಸ್ತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಹಿಂದಿನ 5 ವರ್ಷಗಳಲ್ಲಿ 5813 ದರಖಾಸ್ತು ಮಂಜೂರಿ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗಿದ್ದರೆ ನನ್ನ ಭೂಮಿ ಎಂಬ ಯೋಜನೆ ಜಾರಿಗೆ ಬಂದ 2024ರ ಡಿಸೆಂಬರ್ನಿಂದ ಇಲ್ಲಿಯವರೆಗೆ 4850ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಮಂಜೂರಾಗಿದ್ದ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗಿದೆ. ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಇತಿಹಾಸದಲ್ಲಿ ಅಳತೆಯಾಗದೆ ಇದ್ದ ಗ್ರಾಮೀಣ ಜನ ವಸತಿ ಪ್ರದೇಶ/ಗ್ರಾಮಠಾಣದ ಆಸ್ತಿಗಳಿಗೆ ಡೋಣ್ ಮುಖಾಂತರ ಸರ್ವೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಈವರೆಗೆ ಒಟ್ಟು 3,880 ಗ್ರಾಮಗಳಿಗೆ 10.05 ಲಕ್ಷ ಕರಡು ಪಿ.ಆರ್. ಕಾರ್ಡ್ ಗಳನ್ನು ವಿತರಿಸಲಾಗಿದೆ.