ಐತಿಹಾಸಿಕ ತೀರ್ಮಾನ: ಡಾ. ಪುರುಷೋತ್ತಮ ಬಿಳಿಮಲೆ

ಕನ್ನಡ ಪರವಾದ ಇಂತಹ ನೀತಿಗಳನ್ನು ಸರ್ಕಾರವು ಮುಂದುವರೆಸಬೇಕು

ಬೆಂಗಳೂರು : ಹಿಂದಿ ಪರೀಕ್ಷೆಯ ಅಂಕಗಳನ್ನು ಒಟ್ಟು ಅಂಕಗಳಿಕೆಗೆ ಪರಿಗಣಿಸದಂತೆ ಸರ್ಕಾರ ತೆಗೆದುಕೊಂಡಿರುವ ತೀರ್ಮಾನವನ್ನು  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸ್ವಾಗತಿಸಿದ್ದಾರೆ.

ರಾಜ್ಯ ಶಿಕ್ಷಣ ನೀತಿಯಲ್ಲಿ ಪ್ರತಿಪಾದಿಸಲಾದ ದ್ವಿಭಾಷಾ ನೀತಿಗೆ ಈ ತೀರ್ಮಾನ ಪೂರಕವಾಗಿದ್ದು, ವಿದ್ಯಾರ್ಥಿಗಳ ಮೇಲೆ ಅನಗತ್ಯ ಭಾಷಾ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಕನ್ನಡ ಭಾಷೆಯ ಬೆಳವಣಿಗೆಗೆ ಉತ್ತೇಜನ ನೀಡಲಿದೆ ಎಂದರು.

ಕನ್ನಡದ ಹಿತದೃಷ್ಠಿಯಿಂದ ಈ ನಿರ್ಧಾರವು ಅತ್ಯಂತ ಮಹತ್ವದಾಗಿದ್ದು, ರಾಜ್ಯದ ಭಾಷಾ ಸ್ವಾಭಿಮಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ ಎಂದಿರುವ ಬಿಳಿಮಲೆ, ಕನ್ನಡ ಪರವಾದ ಇಂತಹ ನೀತಿಗಳನ್ನು ಸರ್ಕಾರವು ಮುಂದುವರೆಸಬೇಕು ಎಂದು ಹೇಳಿದರು.

ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಕನ್ನಡ ಸ್ನೇಹಿಯಾಗಿ ರೂಪಿಸುವ ದಿಕ್ಕಿನಲ್ಲಿ ಈ ತೀರ್ಮಾನ ಪರಿಣಾಮಕಾರಿಯಾದ ಹೆಜ್ಜೆಯಾಗಿದೆ ಎಂದು ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ಹೋರಾಟಕ್ಕೆ ಸಂದ ಜಯ
ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಹಿಂದಿನಿಂದಲೂ ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿದ್ದವು. ಅಲ್ಲದೆ ಇತ್ತೀಚೆಗೆ ಜಾರಿಯಾಗಿದ್ದ ತ್ರಿಭಾಷಾ ಸೂತ್ರವನ್ನು ಕೂಡ ವಿರೋಧಿಸಿದ್ದವು.  ಮಾ.31ರಂದು ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ನಡೆಯಲಿದ್ದು, ಈ ವೇಳೆ ಪರೀಕ್ಷಾ ಕೇಂದ್ರಕ್ಕೆ ಮುತ್ತಿಗೆ ಹಾಕುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದವು. ಇದಕ್ಕೆ ಮಣಿದ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

1.64 ಲಕ್ಷ ವಿದ್ಯಾರ್ಥಿಗಳು ಫೇಲ್‌
ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ 1.64 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದರು.  ಈ ಪೈಕಿ 1.48 ಲಕ್ಷ ವಿದ್ಯಾರ್ಥಿಗಳು ಹಿಂದಿಯಲ್ಲಿ ಫೇಲಾಗಿದ್ದರು. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಅಲ್ಲದೆ ಕನ್ನಡ ಪರ ಸಂಘಟನೆಗಳು ಅನ್ಯ ರಾಜ್ಯ ಭಾಷೆಗಳು ನಮ್ಮ ವಿದ್ಯಾರ್ಥಿಗಳು ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡುತ್ತಿವೆ ಎಂದು ಆರೋಪಿಸಿದ್ದರು. ಹೀಗಾಗಿ ಸರ್ಕಾರ ಈ ಬಾರಿ ಕ್ರಾಂತಿಕಾರ ನಡೆ ಕೈಗೊಂಡಿದೆ.

More articles

Latest article

Most read