ವಿಶ್ವಗುರು  ಬಸವಣ್ಣ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಅಧಿಕೃತವಾಗಿ ಘೋಷಿಸಿದ ಸಚಿವ ಸಂಪುಟ

Most read

ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಣೆ ಮಾಡುವಂತೆ ಲಿಂಗಾಯತ ಮಠಾಧೀಶರು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ರಾಜಕೀಯ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಈ ಬೇಡಿಕೆಗೆ ಈಗ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿ ಘೋಷಿಸಿದೆ.

ಬೆಂಗಳೂರಿನ ಮುಖ್ಯಮಂತ್ರಿಗಳ ನೇತೃದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದು ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಣೆ ಮಾಡಲು ಒಪ್ಪಿಗೆ ಸೂಚಿಸಿದೆ.

ಈ ಕುರಿತು ಸಚಿವ ಸಂಪುಟ ಸಭೆ ನಂತರ ಸಚಿವ ಎಚ್.ಕೆ ಪಾಟೀಲ್‌ ಅವರು ಸ್ಪಷ್ಟ ಪಡಿಸಿದ್ದು,  ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಣೆ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದ್ದಾರೆ.

ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಣೆ ಮಾಡುವಂತೆ  ತರಳಬಾಳು ಜಗದ್ಗುರುಗಳು, ಮಾದರ ಚೆನ್ನಯ್ಯ ಸ್ವಾಮೀಜಿ, ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀಶೈಲ್ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು. ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ವೀರಭದ್ರ ಶಿವಾ ಕಡಕಂಚಿ, ಜ್ಞಾನಪ್ರಕಾಶ ಸ್ವಾಮೀಜಿ, ಹುಲಸೂರ ಶ್ರೀಗಳು, ಅಕ್ಕ ಅನ್ನಪೂರ್ಣ ತಾಯಿ, ಮೇಹಕರ ಶ್ರೀಗಳು, ಭಾತಂಬ್ರಾ ಶ್ರೀಗಳು, ಡಾ.ಸಿದ್ದರಾಮ ಬೆಲ್ದಾಳ ಶರಣರು, ಡಾ.ಗಂಗಾಂಬಿಕೆ ಅಕ್ಕ, ಭಂತೆ ವರಜ್ಯೋತಿ, ಭಂತೆ ನಾಗರತ್ನ ಸೇರಿದಂತೆ ವಿವಿಧ ಮಠಗಳ ಸುಮಾರು 48 ಶ್ರೀಗಳು ಮನವಿ ಪತ್ರಕ್ಕೆ ಹಾಕಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳೆದ ವಾರ ಮನವಿ ಸಲ್ಲಿಸಿದ್ದರು.

ಇಂದು ಸಚಿವ ಪ್ರಿಯಾಂಕ್ ಖರ್ಗೆ ಕೂಡ “ಕಾಯಕವೇ ಕೈಲಾಸ, ಅರಿವೇ ಗುರು” ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಅಧಿಕೃತವಾಗಿ ಘೋಷಿಸುವುದರಿಂದ ಇಡೀ ನಾಡಿಗೆ ಸಂತಸವನ್ನು ಉಂಟು ಮಾಡುವುದಲ್ಲದೇ ನಮ್ಮ ರಾಜ್ಯ ಸರ್ಕಾರದ ಗರಿಮೆಯನ್ನು ಹೆಚ್ಚಿಸಿದಂತಾಗುತ್ತದೆ.  ಮಹಾರಾಷ್ಟ್ರ ಸರ್ಕಾರವು ಶಿವಾಜಿ ಮಹಾರಾಜರವರನ್ನು ಆ ರಾಜ್ಯದಲ್ಲಿ “ಸಾಂಸ್ಕೃತಿಕ ನಾಯಕ “ಎಂದು ಘೋಷಿಸಿರುವ ಉದಾಹರಣೆ ಈಗಾಗಲೇ ಇರುತ್ತದೆ. ಆದ್ದರಿಂದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಘೋಷಿಸಬೇಕೆಂದು ತಮ್ಮಲ್ಲಿ ಕೋರುತ್ತೇನೆ ಎಂದು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದ್ದರು.

More articles

Latest article