ವಕ್ಫ್ ಬೋರ್ಡ್ ವಿಷಯವಾಗಿ ರೈತರಿಗೆ ಕೊಟ್ಟ ನೋಟಿಸ್‌ ವಾಪಸ್ ಪಡೆಯುತ್ತೇವೆ; ಹೆಚ್.ಕೆ. ಪಾಟೀಲ್ ಸ್ಪಷ್ಟನೆ

ಉಪ ಚುನಾವಣೆ ಹಿನ್ನೆಲೆ ಭಾರಿ ಸುದ್ದಿಯಾಗುತ್ತಿದ್ದ ಹಾಗೂ ಬಿಜೆಪಿ ದಾಳವನ್ನಾಗಿ ಮಾಡಿಕೊಂಡಿದ್ದ
ವಿಜಯಪುರದ ರೈತರಿಗೆ ‌ವಕ್ಫ್ ಬೋರ್ಡ್ ಪ್ರಕರಣಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದೆ. ಹೌದು, ರೈತರಿಗೆ ಕೊಟ್ಟ ನೋಟಿಸ್‌ನ್ನು ವಾಪಸ್ ಪಡೆಯುತ್ತೇವೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ. ಅಲ್ಲಿನ ತಹಶಿಲ್ದಾರ್ ತಪ್ಪು ಮಾಡಿದ್ದಾರೆ. ರೈತರಿಗೆ ನೋಟಿಸ್‌ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಬಿಜೆಪಿ ವಿರುದ್ದ ಎಂ. ಬಿ ಪಾಟೀಲ್ ಕಿಡಿಕಾರಿದ್ದಾರೆ.

ಸಚಿವ ಜಮೀರ್ ಅಹಮದ್ ರಾಜೀನಾಮೆಗೆ ಬಿಜೆಪಿ ಅಗ್ರಹ ವಿಚಾರವಾಗಿ, ಜಮೀರ್ ಯಾಕೆ ರಾಜೀನಾಮೆ ಕೊಡಬೇಕು? ತಹಶಿಲ್ದಾರ್ ತಪ್ಪು‌ ಮಾಡಿರೋದು. ತಹಶಿಲ್ದಾರ್ ನೊಟೀಸ್ ಕೊಟ್ಟಿದ್ರೆ ಅದನ್ನು ಡಿಸಿ ನೋಡ್ತಾರೆ. ಅದಕ್ಕೂ ಮೇಲೆ ಸರ್ಕಾರ ಇದೆ. ಹೀಗಿರುವಾಗ ಜಮೀರ್ ಯಾಕೆ ರಾಜೀನಾಮೆ ನೀಡಬೇಕು? ಎಂ.ಬಿ ‌ಪಾಟೀಲ್ ಎಲ್ಲಾ ಗೊಂದಲಗಳನ್ನ ನಿವಾರಣೆ ಮಾಡಿದ್ದಾರೆ.

More articles

Latest article

Most read