ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಹಾಕಿಯಲ್ಲಿ ಸ್ಪೈನ್ ತಂಡವನ್ನು ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ.
ಹರ್ಮನ್ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ತಂಡ ಸ್ಪೈನ್ ವಿರುದ್ಧ 2-1 ಅಂತರದ ಗೆಲುವಿನ ಮೂಲಕ ಒಲಿಂಪಿಕ್ಸ್ನ ಕಂಚಿನ ಪದಕ ಗೆದ್ದಿದೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವ ಮೂಲಕ ಭಾರತ 41 ವರ್ಷಗಳ ಬಳಿಕ ಅಮೋಘ ಸಾಧನೆ ಮಾಡಿತ್ತು. ಮತ್ತದೇ ಸಾಧನೆಯನ್ನು ಮಾಡಿದೆ. ಈ ಗೆಲುವಿನೊಂದಿಗೆ ಭಾರತ ತಂಡ ತಂಡದ ಅನುಭವಿ ಗೋಲ್‌ಕೀಪರ್ ಪಿಆರ್ ಶ್ರೀಜೇಶ್‌ಗೂ ವಿದಾಯ ಹೇಳಿದೆ.
ಸ್ಪೇನ್ ತಂಡಕ್ಕೆ ಪಂದ್ಯ ಮುಕ್ತಾಯವಾಗಲು 44 ಸೆಕೆಂಡ್‌ಗಳಿದ್ದಾಗ 6 ಸೆಕೆಂಡ್‌ಗಳ ಅಂತರದಲ್ಲಿ ಎರಡು ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಿದ್ದವು. ಈ ಎರಡೂ ಪೆನಾಲ್ಟಿ ಕಾರ್ನರ್‌ಗಳನ್ನು ಯಶಸ್ವಿಯಾಗಿ ರಕ್ಷಿಸಿಕೊಳ್ಳುವ ಮೂಲಕ ಭಾರತ ಪದಕ ವೇದಿಕೆ ಏರುವಲ್ಲಿ ಯಶಸ್ವಿಯಾಯಿತು.