ಲೋಕಸಭಾ ಚುನಾವಣೆ ದಿನವಾದ ಏಪ್ರಿಲ್ 26 ಮತ್ತು ಮೇ 7 ರಂದು ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲ ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ದಿನಗೂಲಿ ನೌಕರರಿಗೆ ಅಂದು ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.